ನ.21ರಿಂದ ಬೆಂಗಳೂರು-ಮೈಸೂರು ಜೋಡಿ ಮಾರ್ಗದ ಸಂಚಾರ

ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಜೋಡಿ ಮಾರ್ಗದ ರೈಲು ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು. ನ.21ರಿಂದ ಮಾರ್ಗದಲ್ಲಿ ರೈಲುಗಳ ಸಂಚಾರ ಆರಂಭವಾಗಲಿದೆ...
ಟಿಪ್ಪು ಸುಲ್ತಾನ್ ಕಾಲದ ಶಸ್ತ್ರಾಗಾರ ಸ್ಥಳಾಂತರ
ಟಿಪ್ಪು ಸುಲ್ತಾನ್ ಕಾಲದ ಶಸ್ತ್ರಾಗಾರ ಸ್ಥಳಾಂತರ
ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಜೋಡಿ ಮಾರ್ಗದ ರೈಲು ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು. ನ.21ರಿಂದ ಮಾರ್ಗದಲ್ಲಿ ರೈಲುಗಳ ಸಂಚಾರ ಆರಂಭವಾಗಲಿದೆ. 
2008ರಲ್ಲಿ ಬೆಂಗಳೂರು-ಮೈಸೂರು ದ್ವಿಪಥ ರೈಲು ಮಾರ್ಗದ ಕಾಮಗಾರಿ ಆರಂಭವಾಗಬೇಕಿತ್ತು. ನಿರೀಕ್ಷೆಯಂತೆಯೇ 2011ರಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಟಿಪ್ಪು ಸುಲ್ತಾನ್ ಕಾಲದ ಶಸ್ತ್ರಾಗಾರ ಸ್ಥಳಾಂತರದ ಕಾರಣ 1.7 ಕಿಲೋಮೀಟರ್ ಉದ್ದದ ಮಾರ್ಗದಲ್ಲಿ ರೈಲು ಕಾಮಗಾರಿ ವಿಳಂಭವಾಗಿತ್ತು. 
ಅಮೆರಿಕ ವೂಲ್ಫ್ ಹಾಗೂ ನವದೆಹಲಿಯ ಪಿಎಸ್ಎಲ್ ಇಂಜಿನಿಯರಿಂಗ್ ಕಂಪನಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಸುಮಾರು 1 ಸಾವಿರ ಟನ್ ತೂಕದ ಶಸ್ತ್ರಾಗಾರವನ್ನು ಸ್ಥಳಾಂತರ ಮಾಡಿದ ಬಳಿಕ ಇದೀಗ ದ್ವಿಪಥ ರೈಲು ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ. 
ಬಳಿಕ ಶ್ರೀರಂಗಪಟ್ಟಣದಲ್ಲಿ ಬಾಕಿ ಉಳಿದಿದ್ದ ಕಾಮಗಾರಿಯನ್ನು ಪೂರ್ಣಗೊಳಿಸಿ ರೈಲ್ವೆ ಸಂಚಾರಕ್ಕೆ ಅನುಮತಿ ಪಡೆಯಲಾಗಿತ್ತು. ನ.21ರಿಂದ ಮಾರ್ಗದಲ್ಲಿ ರೈಲುಗಳ ಸಂಚಾರ ಆರಂಭವಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com