ವೈದ್ಯರ ಮುಷ್ಕರ: ರೋಗಿಗಳ ಸಾವು ಹಿನ್ನಲೆ ಐಎಂಎ ಅಧ್ಯಕ್ಷರ ವಿರುದ್ದ ಪ್ರಕರಣ ದಾಖಲು

ಕೆಪಿಎಂಇ ತಿದ್ದುಪಡಿ ಕಾಯ್ದೆ-2017ಕ್ಕೆ ವಿರೋಧ ವ್ಯಕ್ತಪಡಿಸಿ ಖಾಸಗಿ ವೈದ್ಯರು ನಡೆಸಿದ ಪ್ರತಿಭಟನೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸಂಭವಿಸಿದ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಹೆಚ್.ಎನ್.ರವೀಂದ್ರ ಮತ್ತು ಕಾರ್ಯದರ್ಶಿ ಡಾ.ವೀರಣ್ಣ ಅವರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು; ಕೆಪಿಎಂಇ ತಿದ್ದುಪಡಿ ಕಾಯ್ದೆ-2017ಕ್ಕೆ ವಿರೋಧ ವ್ಯಕ್ತಪಡಿಸಿ ಖಾಸಗಿ ವೈದ್ಯರು ನಡೆಸಿದ ಪ್ರತಿಭಟನೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸಂಭವಿಸಿದ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಹೆಚ್.ಎನ್.ರವೀಂದ್ರ ಮತ್ತು ಕಾರ್ಯದರ್ಶಿ ಡಾ.ವೀರಣ್ಣ ಅವರ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಹೈಕೋರ್ಟ್ ವಕೀಲ ನಟರಾಜ್ ಶರ್ಮಾ ಎಂಬುವವರು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಹೆಚ್.ಎನ್.ರವೀಂದ್ರ ಮತ್ತು ಕಾರ್ಯದರ್ಶಿ ಡಾ.ವೀರಣ್ಣ ಅವರ ವಿರುದ್ಧ ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ ದೂರು ನೀಡಿದ್ದಾರೆದು ಹೇಳಲಾಗುತ್ತಿದೆ. 
ಪ್ರತಿಭಟನೆಯಲ್ಲಿ ಭಾಗಿಯಾಗುವ ಮೂಲಕ ವೈದ್ಯರು ನಿರ್ಲಕ್ಷ್ಯವನ್ನು ತೋರಿದ್ದು, ಕಳೆದ ನಾಲ್ಕು ದಿನಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ದೊರಕದೆ ರಾಜ್ಯದಲ್ಲಿ ಸಂಭವಿಸಿದ 51 ರೋಗಿಗಳ ಸಾವಿಗೆ ರವೀಂದ್ರ ಅವರು ಜವಾಬ್ದಾರರರಾಗಿದ್ದಾರೆ. ಹೀಗಾಗಿ ವೈದ್ಯರಿಗೆ ನೋಟಿಸ್ ಜಾರಿ ಮಾಡಬೇಕಿದ್ದು, ತನಿಖೆ ನಡೆಸಬೇಕಿದೆ ಎಂದು ದೂರಿನಲ್ಲಿ ನಟರಾಜ ಅವರು ಹೇಳಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com