ರಾಜ್ಯದ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಲ್ಲಿ ಕಲ್ಲಿದ್ದಲು ಕೊರತೆ, ಲೋಡ್ ಶೆಡ್ಡಿಂಗ್ ಅನಿವಾರ್ಯ: ಡಿಕೆ ಶಿವಕುಮಾರ್

ರಾಜ್ಯದ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದಲು ಕೊರತೆ ಉಂತಾಗಿದ್ದು ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಲೋಡ್ ಶೆಡ್ಡಿಂಗ್ ಜಾರಿ ಅನಿವಾರ್ಯ.........
ಲೋಡ್ ಶೆಡ್ಡಿಂಗ್- ಸಾಂದರ್ಭಿಕ ಚಿತ್ರ
ಲೋಡ್ ಶೆಡ್ಡಿಂಗ್- ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದಲು ಕೊರತೆ ಉಂತಾಗಿದ್ದು ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಲೋಡ್ ಶೆಡ್ಡಿಂಗ್ ಜಾರಿ ಅನಿವಾರ್ಯ ಆಗಲಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.
ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ ಮೇಲೆ ಉಂಟಾಗಿರುವ ಪ್ರತಿಕೂಲ ಸ್ಥಿತಿಯ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ಬಳಿಕ ಪತ್ರಕರ್ತರೊಡನೆ ಮಾತನಾಡಿದ ಅವರು "ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇದೆ. ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ದಿನನಿತ್ಯದ ಅಗತ್ಯಕ್ಕೆ ಎಷ್ಟು ಅಗತ್ಯವೋ ಅಷ್ಟು ಮಾತ್ರ ಕಲ್ಲಿದ್ದಲು ಪೂರೈಕೆಯಾಗುತ್ತಿದ್ದು ಪೂರೈಕೆಯಲ್ಲಿ ತುಸು ಏರುಪೇರಾದರೂ ಉತ್ಪಾದನೆ ಸ್ಥಗಿತಗೊಳ್ಳುವ ಸ್ಥಿತಿ ಇದೆ. ಆಗ ವಿದ್ಯುತ್ ಕಡಿತ ಅನಿವಾರ್ಯವಾಗಲಿದೆ" ಎಂದರು.
"ರಾಜ್ಯದಲ್ಲಿ ವಿದ್ಯುತ್ ಕೊರತೆಯಂಟಾಗದಂತೆ ನೋಡಿಕೊಳ್ಳಲು ಏನು ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತು ಮುಖ್ಯಮಂತ್ರಿಗಳೊಡನೆ ಚರ್ಚಿಸಿದ್ದೇನೆ" ಶಿಕೆಶಿ ತಿಳಿಸಿದರು.
ರಾಜ್ಯದಲ್ಲಿ ದಿನ ಬಳಕೆಗೆ ಸಾಕಾಗುವಷ್ಟು ಕಲ್ಲಿದ್ದಲು ಮಾತ್ರವೇ ಇದ್ದು ಹೆಚ್ಚುವರಿ ಸಂಗ್ರಹವಿಲ್ಲ. ಈ ಸಂಬಂಧ ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು ಹೆಚ್ಚುವರಿ ಕಲ್ಲಿದ್ದಲು ಪೂರೈಸುವಂತೆ ಕೇಳಿದೆ. ಆದರೆ ಕೇಂದ್ರ ಸರ್ಕಾರ ರೈಲ್ವೇ ಮೂಲಕವಲ್ಲದೆ ಬೇರೆ ಮಾರ್ಗದಿಂದ ಕಲ್ಲಿದ್ದಲು ಪೂರೈಕೆ ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಬೇಡಿಕೆಯನ್ನು ನಿರಾಕರಿಸಿದೆ.
ಇದಲ್ಲದೆ ಕಲ್ಲಿದ್ದಲು ಗಣಿಗಾರಿಕೆ ಸಂಬಂಧ ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು ರಾಜ್ಯಕ್ಕೆ ಶೋಕಾಸ್ ನೋಟೀಸ್ ಸಹ ಜಾರಿಯಾಗಿದೆ. ಇದೆಲ್ಲದರ ನಡುವೆ ಬೇಸಿಗೆ ಸಮೀಪಿಸಿರುವ ಕಾರಣ ರಾಜ್ಯಕ್ಕೆ ಹೆಚ್ಚುವರಿ ವಿದ್ಯುತ್ ಬೇಕಾಗುತ್ತದೆ. ಆ ಸಂದರ್ಭದಲ್ಲಿ ಕಲ್ಲಿದ್ದಲು ಕೊರತೆಯಾದಲ್ಲಿ ರಾಜ್ಯದ ವಿದ್ಯುತ್ ಉತ್ಪಾದನೆ ಕಂಠಿತವಾಗಿ ಹೊರರಾಜ್ಯಗಳಿಂದ ದುಬಾರಿ ಬೆಲೆಗೆ ವಿದ್ಯುತ್ ಖರೀದಿ ನಡೆಸುವುದು ಅನಿವಾರ್ಯವಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com