ಹೊಸ ವರ್ಷಕ್ಕೆ ಸಿಎಂ ಸಿದ್ದು ಉಡುಗೊರೆ: 300ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ ಪ್ರಾರಂಭಕ್ಕೆ ನಿರ್ಧಾರ

ಹೊಸ ವರ್ಷಕ್ಕೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಜನತೆಗೆ ಉಡುಗೊರೆ ನೀಡಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜ.1 ರಿಂದ ರಾಜ್ಯಾದ್ಯಂತ 300 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲು ನಿರ್ಧರಿಸಿದ್ದಾರೆಂದು...
ಇಂದಿರಾ ಕ್ಯಾಂಟೀನ್
ಇಂದಿರಾ ಕ್ಯಾಂಟೀನ್
ಬೆಂಗಳೂರು: ಹೊಸ ವರ್ಷಕ್ಕೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಜನತೆಗೆ ಉಡುಗೊರೆ ನೀಡಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜ.1 ರಿಂದ ರಾಜ್ಯಾದ್ಯಂತ 300 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲು ನಿರ್ಧರಿಸಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆದ ಇಂದಿರಾಗಾಂಧಿಯವರ 100ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶಕ್ಕಾಗಿ ಪ್ರಾಣವನ್ನು ನೀಡಿದ ಇಂದಿರಾ ಗಾಂಧಿ ಮಹಾನ್ ನಾಯಕಿಯಾಗಿದ್ದು, ಅವರ ಹೆಸರಿನಲ್ಲಿ ಬಡವರ ಹಸಿವು ನೀಗಿಸುವುದಕ್ಕಾಗಿ ರಾಜ್ಯದಾದ್ಯಂತ 300 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುತ್ತದೆ. ಜ.1ರಿಂದ ಈ ಎಲ್ಲಾ ಕ್ಯಾಂಟೀನ್ ಆರಂಭಗೊಳ್ಳಲಿವೆ. ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಗಳಲ್ಲಿ ಈವರೆಗೆ 1 ಕೋಟಿಗೂ ಹೆಚ್ಚು ಜನ ಊಟ, ಉಪಾಹಾರ ಮಾಡಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮಕ್ಕೂ ಅವರೇ ಪ್ರೇರಣೆ ಎಂದು ತಿಳಿಸಿದರು. 
ಬೆಂಗಳೂರಿನ 198 ಬಿಬಿಎಂಪಿ ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯಲಾಗುತ್ತದೆ. ಪ್ರತೀ ಜಿಲ್ಲೆ ಹಾಗೂ ತಾಲೂಕಿನಲ್ಲೂ 300 ಇಂದಿರಾ ಕ್ಯಾಂಟೀನ್ ಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ. 
ಇಂದಿರಾ ಗಾಂಧಿಯವರ ಬಡತನ ತೊಲಗಿಸಿ ಎಂಬ ಘೋಷಣೆಯೇ ನಮಗೆ ಪ್ರೇರಣೆಯಾಗಿದ್ದು, ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವಾಗಿಸುತ್ತೇವೆ. ಬಡವರ ಸಬಲೀಕರಣಕ್ಕಾಗಿ ಇಂದಿರಾ ಗಾಂಧಿಯವರು ಬ್ಯಾಂಕುಗಳನ್ನು ರಾಷ್ಟ್ರೀಕರಣ ಗೊಳಿಸಿದ್ದರು. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೋಟು ನಿಷೇಧದ ಮೂಲಕ ಬ್ಯಾಂಕುಗಳ ಬಾಗಿಲನ್ನು ಮುಚ್ಚಿದರು ಎಂದಿದ್ದಾರೆ. 
ರಾಜಕೀಯಕ್ಕೆ ಯಡಿಯೂರಪ್ಪ, ಶೋಭಾ ಹಾಗೂ ಈಶ್ವರಪ್ಪ ಯೋಗ್ಯರಲ್ಲ
ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ರಾಜ್ಯದಲ್ಲಿ ಕೋಮು ಗಲಭೆಗಳನ್ನು ಸೃಷ್ಟಿಸುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನ ನಡೆಸುತ್ತಿದೆ. ಆದರೆ, ಇದರ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ಮಾಡುತ್ತಾರೆ. ಜನರಿಗಾಗಿ ಸರ್ಕಾರ ತಂದಿರುವ ಯೋಜನೆಗಳು ಜನರಿಗೆ ತಲುಪಿಸಲೂ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ. 
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಶೋಭಾ ಕರಾಂದ್ಲಾಜೆ, ಕೆ.ಎಸ್. ಈಶ್ವರಪ್ಪ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ರಾಜಕೀಯಕ್ಕೆ ಯೋಗ್ಯರಲ್ಲ. ಬಿಜೆಪಿ ನಾಯಕರು ಮಾನವೀಯತೆಯುಳ್ಳವರು, ದುಷ್ಟ ಮನಸ್ಥಿತಿಯುಳ್ಳವರು. ಹುಸಿ ಸಿದ್ಧಾಂತಜ್ಞರಾಗಿರುವ ಬಿಜೆಪಿಯವರು ತಮ್ಮ ಕೆಲಸಗಳಿಗೆ ಸಮಾಜವನ್ನು ಒಡೆಯುತ್ತಿದ್ದಾರೆಂದು ಆರೋಪಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com