ವೈದ್ಯರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ವಕೀಲರಾದ ಎನ್.ಪಿ.ಅಮೃತೇಶ್, ಜಿ.ಆರ್. ಮೋಹನ್ ಹಾಗೂ ಆದಿನಾರಾಯಣ ಎಂಬುವವರು ಸಲ್ಲಿಸಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಚ್.ಜಿ.ರಮೇಶ್ ಹಾಗೂ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಪರಿಶೀಲನೆ ನಡೆಸಿದ್ದು, ವಿಚಾರಣೆಯನ್ನು ಜ.2ಕ್ಕೆ ಮೂಂದೂಡಿದೆ.