ಬೆಂಗಳೂರು, ಮೈಸೂರು, ತುಮಕೂರು ವಿಶ್ವವಿದ್ಯಾಲಯ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಜಾನಪದ ವಿಶ್ವವಿದ್ಯಾಲಯ ಕುಲಪತಿಗಳ ನೇಮಕ ಬಾಕಿಯಿದೆ. ಈ ಸಂಬಂಧ ಕಳೆದ 6 ತಿಂಗಳಿನಿಂದಲೂ ಪ್ರಕ್ರಿಯೆ ನಡೆಯುತ್ತಿದೆ. ಕುಲಪತಿ ಶೋಧನಾ ಸಮಿತಿ ರಚಿಸಿ ಆಯ್ಕೆಯಾದ ಹೆಸರುಗಳನ್ನು ರಾಜಭವನಕ್ಕೆ ಕಳುಹಿಸಲಾಗಿದೆ. ಆದರೆ, ಪ್ರತಿಷ್ಠಿತ ಎನಿಸಿಕೊಂಡಿರುವ ಬೆಂಗಳೂರು ಹಾಗೂ ಮೈಸೂರು ವಿವಿಗಳಿಗೆ ತಮಗೆ ಆಪ್ತರಾದವರನ್ನು ನೇಮಿಸುವಂತೆ ಸರ್ಕಾರದ ಕಡೆಯಿಂದ ರಾಜಭವನದ ಮೇಲೆ ಒತ್ತಡ ಹೇರಲಾಗುತ್ತಿದೆ. ಹಾಗಾಗಿ ರಾಜ್ಯಪಾಲರು ಅಂಗೀಕಾರ ನೀಡಿಲ್ಲ. ಬದಲಾಗಿ ಹೊಸ ಪ್ರಸ್ತಾವ ಕಳುಹಿಸಿಕೊಡುವಂತೆ ನಿರ್ದೇಶನ ನೀಡಿದ್ದಾರೆಂದು ಹೇಳಲಾಗುತ್ತಿದೆ.