ಆತ್ಮಹತ್ಯೆಗೆ ಶರಣಾದ ಟೆಕಿ ಗೀತಾಂಜಲಿ (ಒಳ ಚಿತ್ರ)
ರಾಜ್ಯ
ಬೆಂಗಳೂರು: 10ನೇ ಅಂತಸ್ತಿನಿಂದ ಹಾರಿ ಗೋವಾ ಮೂಲದ ಟೆಕಿ ಸಾವು!
ಉದ್ಯೋಗ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಗೋವಾ ಮೂಲದ ಟೆಕಿ 10ನೇ ಅಂತಸ್ತಿನಿಂದ ಹಾರಿ ಕೆಳಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ.
ಬೆಂಗಳೂರು: ಉದ್ಯೋಗ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಗೋವಾ ಮೂಲದ ಟೆಕಿ 10ನೇ ಅಂತಸ್ತಿನಿಂದ ಹಾರಿ ಕೆಳಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ.
ಬೆಂಗಳೂರಿನ ಬೆಳ್ಳಂದೂರು ಬಳಿಯ ಕಾಡುಬಿಸನಹಳ್ಳಿಯ ನೆಸ್ನಾ ಟೆಕ್ ಪಾರ್ಕ್ ನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವೈಟ್ ಫೀಲ್ಡ್ ಡಿಸಿಪಿ ಅಬ್ದುಲ್ ಅಹದ್ ಅವರು, ಮೃತ ಟೆಕಿ ಸುಮಾರು 27 ವರ್ಷದವರಾಗಿದ್ದು, ಅವರ ಹೆಸರು ಗೀತಾಂಜಲಿ ಎಂದು ತಿಳಿದುಬಂದಿದೆ. ಇಲ್ಲಿನ ಅದ್ವಾ ಆಪ್ಟಿಕಲ್ ನೆಟ್ವರ್ಕ್ಸ್ ಸಂಸ್ಥೆಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿನಲ್ಲಿ ಕಟ್ಟಡ 10ನೇ ಮಹಡಿಯಿಂದ ಕೆಳಗೆ ಹಾರಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. ಅಂತೆಯೇ ಅವರ ಕುಟುಂಬಸ್ಥರಿಗೆ ವಿಚಾರ ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ