ಒಂದೇ ದಿನ 2 ವಿಭಿನ್ನ ಆದೇಶ: ಕೊಡಗು ಜಿಲ್ಲಾಧಿಕಾರಿ ವಿರುದ್ಧ 'ಹೈ' ಗರಂ

ಮಡಿಕೇರಿಯ ವಿರಾಜಪೇಟೆ ತಾಲೂಕಿನಲ್ಲಿ ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಒಂದೇ ವ್ಯಾಜ್ಯದಲ್ಲಿ ಒಂದೇ ದಿನ ಉಭಯ ಕಕ್ಷಿದಾರರಿಗೂ ಅನುಕೂಲವಾಗುವಂತೆ ಎರಡು ವಿಭಿನ್ನ ಆದೇಶ ಹೊರಡಿಸಿದ ಕೊಡಗು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸಂಟ್ ಡಿಸೋಜಾ ವಿರುದ್ಧ ಹೈಕೋರ್ಟ್...
ಹೈಕೋರ್ಟ್
ಹೈಕೋರ್ಟ್
Updated on: 
ಬೆಂಗಳೂರು: ಮಡಿಕೇರಿಯ ವಿರಾಜಪೇಟೆ ತಾಲೂಕಿನಲ್ಲಿ ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಒಂದೇ ವ್ಯಾಜ್ಯದಲ್ಲಿ ಒಂದೇ ದಿನ ಉಭಯ ಕಕ್ಷಿದಾರರಿಗೂ ಅನುಕೂಲವಾಗುವಂತೆ ಎರಡು ವಿಭಿನ್ನ ಆದೇಶ ಹೊರಡಿಸಿದ ಕೊಡಗು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸಂಟ್ ಡಿಸೋಜಾ ವಿರುದ್ಧ ಹೈಕೋರ್ಟ್ ಕೆಂಡಾಮಂಡಲಗೊಂಡಿದ್ದು, ಜಿಲ್ಲಾಧಿಕಾರಿ ವಿರುದ್ಧ ದೂರು ದಾಖಲಿಸುವಂತೆ ಗುರುವಾರ ಆದೇಶ ಹೊರಡಿಸಿದೆ. 
ಜಿಲ್ಲಾಧಿಕಾರಿಯ ಕ್ರಮ ಪ್ರಶ್ನಿಸಿ ವಿರಾಜಪೇಟೆಯ ನಿವಾಸಿ ಬಿ.ಆರ್. ಮೊಹಮ್ಮದ್ ಶೋಯಬ್ ಎಂಬುವವರು ತಕರಾರು ಅರ್ಜಿ ಸಲ್ಲಿಸಿದ್ದರು. 
ಈ ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ವಿನೀತ್ ಕೋಠಾರಿ ಅವರಿದ್ದ ಏಕಸದಸ್ಯ ಪೀಠ, ನ್ಯಾಯಾಂಗ ವಿಚಕ್ಷಣಾ ವಿಭಾಗದ ರಿಜಿಸ್ಟ್ರಾರ್ ಅಥವಾ ಕೊಡಗಿನ ಸ್ಥಳೀಯ ನ್ಯಾಯಾಂಗ ಅಧಿಕಾರಿಯು ಪ್ರಕರಣ ಸಂಬಂಧ ಕೊಡಗು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸಂಟ್ ಡಿಸೋಜಾ ವಿರುದ್ಧ ದೂರು ದಾಖಲಿಸಬೇಕು ಎಂದು ಆದೇಶಿಸಿತು. 
ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶ ಇಲಾಖಾ ವಿಚಾರಣೆ ನಡೆಸಬೇಕು. ಮುಂದಿನ ವಿಚಾರಣೆ ವೇಳೆ ಜಿಲ್ಲಾಧಿಕಾರಿ ವಿರುದ್ಧ ಕೈಗೊಂಡ ಕ್ರಮದ ಕುರಿತು ವರದಿ ಸಲ್ಲಿಸಬೇಕು ಎಂದು ನ್ಯಾಯಮೂರ್ತಿಗಳು ಇದೇ ವೇಳೆ ನಿರ್ದೇಶನ ನೀಡಿದ್ದಾರೆ. 
ಇದೇ ವೇಳೆ ಪ್ರಕರಣದಲ್ಲಿ ಜಿಲ್ಲಾಧಿಕಾರಿಯು ಹೊರಡಸಿದ ಅದೇಶಗಳಿಗೆ ಅರ್ಜಿ ಇತ್ಯರ್ಥವಾಗುವವರೆಗೆ ಅನ್ವಯವಾಗುವಂತೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com