ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತು ಚರ್ಚೆ: ಖಾಲಿ ಕುರ್ಚಿಗಳ ಕಂಡು ಸ್ಪೀಕರ್ ಅಸಮಾಧಾನ!

ಸುವರ್ಣ ವಿಧಾನಸೌಧದಲ್ಲಿ ನಡೆದ ಈ ಬಾರಿಯ ಚಳಿಗಾಲ ಅಧಿವೇಶನ ಉತ್ತರ ಕರ್ನಾಟಕ ಜನತೆಯ ನಿರೀಕ್ಷೆಗಳನ್ನು ಹುಸಿ ಮಾಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆದ ಈ ಬಾರಿಯ ಚಳಿಗಾಲ ಅಧಿವೇಶನ ಉತ್ತರ ಕರ್ನಾಟಕ ಜನತೆಯ ನಿರೀಕ್ಷೆಗಳನ್ನು ಹುಸಿ ಮಾಡಿದೆ. 
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗಳು ನಡೆಯದೆಯೇ ಈ ಭಾಗದ ಜನತೆಗೆ ಈ ಭಾಗದ ಜನತೆಯಲ್ಲಿ ನಿರಾಸೆಯನ್ನು ಮೂಡಿಸಿದೆ.
ಜನಪ್ರತಿನಿಧಿಗಳು ಕಲಾಪದಲ್ಲಿ ಭಾಗವಸಿದ್ದಕ್ಕಿಂತಲೂ ಪಕ್ಷ ಸಂಘಟನೆಯಲ್ಲಿ ಮಗ್ನರಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶವನ್ನು ಮೂಡಿಸಿದೆ. ಅಲ್ಲದೆ, ಸದನದಲ್ಲಿ ಖಾಲಿ ಕುರ್ಚಿಗಳನ್ನು ಕಂಡು ಸ್ಪೀಕರ್ ಕೋಳಿವಾಡ ಅವರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ. 
ಉತ್ತರ ಕರ್ನಾಟಕದಲ್ಲಿರುವ ಸಮಸ್ಯೆಗಳ ಕುರಿತಂತೆ ಅಧಿವೇಶನದಲ್ಲಿ ವಿಶೇಷವಾಗಿ ಚರ್ಚೆ ನಡೆಸುವಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಆಗ್ರಹಿಸಿದ್ದರು. ನಾಲ್ಕು ದಿನಗಳ ಅಧಿವೇಶನದಲ್ಲಿ ಜನಪ್ರತಿನಿಧಿಗಳು ಭಾಗವಹಿಸಿದೇ ಸದನದಲ್ಲಿ ಕುರ್ಚಿಗಳು ಖಾಲಿಯಾಗಿದ್ದುದ್ದನ್ನು ಕಂಡ ಸ್ಪೀಕರ್ ಕೋಳಿವಾಡ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಆಲಮಟ್ಟಿ ಯೋಜನೆಯಿಂದಾಗಿ ಭೂಮಿಯನ್ನು ಕಳೆದುಕೊಂಡ ರೈತರ ಸಮಸ್ಯೆಗಳ ಕುರಿತಂತೆ ಶಾಸಕ ಗೋವಿಂದ್ ಕಿರ್ಜೋಲ್, ಹೆಚ್.ವೈ.ಮೇಟಿ, ಜೆ.ಟಿ. ಪಾಟೀಲ್ ಮತ್ತು ಸಿಧು ನ್ಯಾಮಗೌಡ ಅವರು ವಿಶೇಷ ಅಧಿವೇಶ ನಡೆಸುವಂತೆ ಆಗ್ರಹಿಸಿದರು. 
ಇದಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್ ಕೋಳಿವಾಡ ಅವರು. ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತಂತೆ ಚರ್ಚೆ ನಡೆಸುವಂತೆ ಆಗ್ರಹಿಸಲಾಗುತ್ತಿದೆ. ಆದರೆ, ಚರ್ಚೆ ನಡೆಸುವಂತೆ ಕೇವಲ ನಾಲ್ವರು ನಾಯಕರು ಮಾತ್ರ ಆಗ್ರಹಿಸುತ್ತಿದ್ದಾರೆ. ಕಬ್ಬು, ತೆಂಗಿನ ಬಗ್ಗೆ ಮಾತನಾಡುತ್ತಿರುವವರು ಮೆಕ್ಕೆಜೋಳ ಇತರೆ ಬೆಳೆಗಳ ಬಗ್ಗೆ ಆಸಕ್ತಿಯನ್ನು ತೋರಿಸುತ್ತಿಲ್ಲ ಎಂದು ಹೇಳಿದ್ದಾರೆ. 
ಅರ್ಧಕರ್ಧ ಜನಪ್ರತಿನಿಧಿಗಳು ಕಲಾಪದಲ್ಲಿ ಭಾಗವಹಿಸದೇ ನಿರ್ಲಕ್ಷ್ಯವಹಿಸಿದ್ದು, ಬಹುದಿನದ ಬೇಡಿಕೆಯಾದ ಮಹದಾಯಿ ಸಮಸ್ಯೆ ತಾರ್ಕಿಕ ಅಂತ್ಯ ಕಾಣದಿರುವುದು, ಮೂಲಭೂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯದೇ ಕೇವಲ ಕಾಲಹರಣ ಮಾಡಿದ್ದಾರೆಂದು ಇದೀಗ ಜನರು ತೀವ್ರ ಬೇಸರವನ್ನು ವ್ಯಕ್ತಪಡಿಸುತ್ತಿದ್ದಾರೆ. 
ಉತ್ತರ ಕರ್ನಾಟಕ ಭಾಗದಲ್ಲಿನ ಜಲ್ವಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ಸಲುವಾಗಿ ಬೆಳಗಾವಿಯಲ್ಲಿ ರಾಜ್ಯ ಸರ್ಕಾರ ಬಹುಕೋಟಿ ವೆಚ್ಚದಲ್ಲಿ ಸುವರ್ಣ ವಿಧಾನಸೌಧವನ್ನು ನಿರ್ಮಾಣ ಮಾಡಿದೆ. 
ನ.13ರಿಂದ ನ.24ರವರೆಗೆ ಒಟ್ಟು 10 ದಿನಗಳ ಕಾಲ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆದಿದ್ದು, ಚಳಿಗಾಲದ ಅಧಿವೇಶನದಲ್ಲಿ 224 ಶಾಸಕರಲ್ಲಿ ಅರ್ಧದಷ್ಟು ಶಾಸಕರು ಹಾಗೂ 75 ವಿಧಾನ ಪರಿಷತ್ ಸದಸ್ಯರಲ್ಲಿ 35ಕ್ಕೂ ಹೆಚ್ಚು ಸದಸ್ಯರು ಕಲಾಪದಿಂದ ದೂರ ಉಳಿದಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕ ಭಾಗದ ಬಹುಬೇಡಿಕೆಯಾದ ಮಹದಾಯಿ ಸಮಸ್ಯೆಗೆ ಈ ಸಲ ಪರಿಹಾರ ಸಿಗಬಹುದು ಎಂಬ ಜನರ ನಿರೀಕ್ಷೆ ಹುಸಿಯಾಗಿದೆ. ಶಿಕ್ಷಣ, ರಸ್ತೆ, ವಿದ್ಯುತ್, ಆರೋಗ್ಯ, ಉದ್ಯೋಗ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತ ಪರಿಹಾರಕ್ಕೆ ಯಾವೊಬ್ಬ ಜನಪ್ರತಿನಿಧಿಗಳು ಈ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದೇ ಇರುವುದು ಇದೀಗ ಜನರ ಅಸಮಾಧಾನಕ್ಕೆ ಕಾರಣವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com