ನಗರಗಳ ಮೇಲೆ ಹದ್ದಿನ ಕಣ್ಣಿಡಲಿವೆ ಸಿಸಿಟಿವಿ ಕ್ಯಾಮರಾಗಳು

ನಗರಗಳಲ್ಲಿ ಅಪರಾಧ ಪ್ರಕರಣಗಳು ನಡೆಯುವುದನ್ನು ತಡೆಗಟ್ಟಲು ವಾಣಿಜ್ಯ ಸಂಕೀರ್ಣಗಳು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ನಗರಗಳಲ್ಲಿ ಅಪರಾಧ ಪ್ರಕರಣಗಳು ನಡೆಯುವುದನ್ನು ತಡೆಗಟ್ಟಲು ವಾಣಿಜ್ಯ ಸಂಕೀರ್ಣಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕೆಂದು ರಾಜ್ಯ ಸರ್ಕಾರ ಸದ್ಯದಲ್ಲಿಯೇ ಕಾನೂನು ಜಾರಿಗೆ ತರಲಿದೆ.
ದೆಹಲಿ ನಗರದ ಪ್ರಮುಖ ಸ್ಥಳಗಳಲ್ಲಿ 1.4 ಲಕ್ಷ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ ಕಡ್ಡಾಯ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಕಡ್ಡಾಯ ಮಾಡಿದ ನಂತರ ಇದೀಗ ಕರ್ನಾಟಕ ಸರ್ಕಾರ, ಕರ್ನಾಟಕ ಸಾರ್ವಜನಿಕ ಸುರಕ್ಷತೆ ಜಾರಿ ಮಸೂದೆಯನ್ನು ಜಾರಿಗೆ ತಂದಿದೆ.
ಅದರ ಪ್ರಕಾರ ಹೆಚ್ಚು ಜನರು ಓಡಾಡುವ ಪ್ರದೇಶಗಳಲ್ಲಿ ಕಣ್ಗಾವಲು ವ್ಯವಸ್ಥೆಯನ್ನು ಅಳವಡಿಸಬೇಕೆಂದು ಕಡ್ಡಾಯ ಮಾಡಲಾಗಿದೆ. ಇದರಡಿಯಲ್ಲಿ ವಾಣಿಜ್ಯ ಸಂಕೀರ್ಣಗಳು, ಮಳಿಗೆಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳು, ಧಾರ್ಮಿಕ ಸಂಕೀರ್ಣಗಳು, ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಕಟ್ಟಡಗಳು ಒಳಗೊಳ್ಳುತ್ತದೆ.
ಅಪರಾಧ, ದರೋಡೆ ಪ್ರಕರಣಗಳು ನಡೆಯುವುದನ್ನು ತಡೆಗಟ್ಟಲು ಕಣ್ಗಾವಲು ವ್ಯವಸ್ಥೆಗಳ ಅಳವಡಿಕೆಯನ್ನು ಈ ಮಸೂದೆ ಕಲ್ಪಿಸುತ್ತಿದೆ. 1.3 ಕೋಟಿಗೂ ಅಧಿಕ ಜನಸಂಖ್ಯೆಯಿರುವ ನಗರಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ. 
ಪ್ರಸ್ತುತ ಬೆಂಗಳೂರು ನಗರದಲ್ಲಿ 5.4 ಲಕ್ಷ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಅವುಗಳಲ್ಲಿ 2,000 ಸರ್ಕಾರಿ ಕಟ್ಟಡಗಳಲ್ಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com