ಮೈಸೂರು: 83ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Published On :
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.
ಇಂದು ಬೆಳಗ್ಗೆ ದೀಪ ಬೆಳಗಿಸುವ ಮೂಲಕ ಅಕ್ಷರ ಜಾತ್ರೆ ಉದ್ಘಾಟಿಸಿ ಮಾತನಾಡಿದ ಸಿಎಂ, ಕರ್ನಾಟಕದ ಸಾಂಸ್ಕೃತಿಕ ನಗರಿ ಎಂದೇ ಪ್ರಸಿದ್ಧವಾಗಿರುವ ಮೈಸೂರಿನಲ್ಲಿ ಆಯೋಜಿಸಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದ್ದೇನೆ. ಇದು ನನ್ನ ಬದುಕಿನ ಸಾರ್ಥಕ ಕ್ಷಣಗಳಲ್ಲೊಂದು ಎಂದರು.
ರಾಜ್ಯದಲ್ಲಿ ನಾಡಿಗೀತೆ ಇರುವಂತೆ ನಾಡಧ್ವಜವೂ ಇರಬೇಕು ಎಂದು ಪ್ರತಿಪಾದಿಸಿದ ಸಿಎಂ, ತಮ್ಮ ಮಾತಿಗೆ ಪೂರಕವಾಗಿ ರಾಷ್ಟ್ರಕವಿ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ -ಗೀತೆಯನ್ನು ಬಳಸಿಕೊಂಡರು.
ನಾಡಗೀತೆ ಆಶಯಕ್ಕೆ, ಆದರ್ಶಕ್ಕೆ ನಾವು ಬದ್ಧರಾಗಿದ್ದೇವೆ. ಇದನ್ನು ವಿರೋಧಿಸುವುದು ನಾಡು ನುಡಿಗೆ ತೋರುವ ಅಗೌರವ. ಕನ್ನಡ ಎನ್ನುವುದು ನನಗೆ ರಾಜಕೀಯ ಅಲ್ಲ.ಅದು ನನ್ನ ಬದುಕು. ನಾನು ಹುಟ್ಟು ಕನ್ನಡಪ್ರೇಮಿ. ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿ ಸಾರ್ವತ್ರಿಕ ಜೀವನ ಪ್ರಾರಂಭಿಸಿದ್ದ ನಾನುಅಲ್ಲಿಂದ ಇಲ್ಲಿಯವರೆಗೆ ನೆಲ-ಜಲ-ನುಡಿಯ ಬಗ್ಗೆಎಂದೂ ರಾಜಿಮಾಡಿ ಕೊಂಡಿಲ್ಲ, ಎಂದೂ ರಾಜಕೀಯವನ್ನೂ ಮಾಡಿಲ್ಲ ಎಂದರು.
ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ! ಅದು ಕನ್ನಡದ ಜನ, ನೆಲ, ಜಲ, ಬದುಕು,ಸಾಹಿತ್ಯ, ಸಂಸ್ಕೃತಿ, ಕಲೆ, ಸಂಗೀತ ಎಲ್ಲವನ್ನೂ ಒಳಗೊಂಡ ಕರ್ನಾಟಕ, ಅದುವೇ ಕನ್ನಡತನ. ಕರ್ನಾಟಕದ ನೆಲದಲ್ಲಿ ವಾಸಿಸುತ್ತಿರುವವರೆಲ್ಲರೂ ಕನ್ನಡಿಗರು ಎಂದು ನಾವು ತಿಳಿದು ಕೊಂಡಿದ್ದೇವೆ. ಎಂದು ಸಿಎಂ ಹೇಳಿದರು.
'ಅಭಿವ್ಯಕ್ತಿ ಸ್ವಾತಂತ್ರದಲ್ಲಿ ಬಲವಾದ ನಂಬಿಕೆ ನನ್ನದು. ಸಾಹಿತ್ಯ, ಚಿತ್ರಕಲೆ, ಸಂಗೀತ, ಮಾಧ್ಯಮ ಎಲ್ಲವೂ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಭಿನ್ನ ಮುಖಗಳು. ಇದನ್ನು ದೇಶಭಕ್ತಿ, ಧರ್ಮ, ರಾಷ್ಟ್ರೀಯತೆ ಹೆಸರಿನಲ್ಲಿ ದಮನ ಮಾಡುವುದು ಖಂಡನೀಯ' ಎಂದರು.
'ಅನ್ಯ ಭಾಷಿಕರು ಇಲ್ಲಿ ಬದುಕು ರೂಪಿಸಿಕೊಳ್ಳಲು ಅವರಿಗೆ ಸ್ವಾತಂತ್ರ್ಯವಿದೆಯಾದರೂ, ಇಲ್ಲಿನ ನೆಲದ ಭಾಷೆ ಕನ್ನಡವನ್ನು ಅವರು ಕಲಿಯಲೇಬೇಕು' ಎಂದು ಸಿದ್ದರಾಮಯ್ಯ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಐದನೇ ಬಾರಿಗೆ ನಡೆಯುತ್ತಿರುವ ಅಕ್ಷರ ಜಾತ್ರೆಗೆ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರು ಅಧ್ಯಕ್ಷತೆ ವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮೈಸೂರುSiddaramaiahಸಿದ್ದರಾಮಯ್ಯMysuru83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ83rd All India Kannada Sahitya Sammelana
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


