ದೆಹಲಿಯಾದ್ಯಂತ 1.4 ಲಕ್ಷ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದ ದೆಹಲಿ ಸರ್ಕಾರದ ಮಾದರಿಯಲ್ಲಿ ಕರ್ನಾಟಕದಲ್ಲಿ ಸಹ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ಕಣ್ಗಾವಲು ವ್ಯವಸ್ಥೆಯನ್ನು ಕಡ್ಡಾಯವಾಗಿ ಜಾರಿಗೆ ತರಲಾಗುತ್ತಿದೆ. ಕರ್ನಾಟಕ ಸಾರ್ವಜನಿಕ ಸುರಕ್ಷತೆ (ಕ್ರಮಗಳು) ಜಾರಿ ಕಾಯ್ದೆಯನ್ನು ಈ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಇದರ ಅನುಸಾರ ವಾಣಿಜ್ಯ ಸಂಸ್ಥೆಗಳು, ಅಂಗಡಿಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು, ಧಾರ್ಮಿಕ ಸಂಕೀರ್ಣಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಇತರ ತಾಣಗಲಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಲಿದೆ.