ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಖಚಿತ: ಮೋಹನ್ ಭಾಗವತ್

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಖಚಿತ ಎಂದು ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್...
ಮೋಹನ್ ಭಾಗವತ್
ಮೋಹನ್ ಭಾಗವತ್
ಉಡುಪಿ(ಕರ್ನಾಟಕ): ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಖಚಿತ ಎಂದು ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಘೋಷಿಸಿದ್ದಾರೆ. 
ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ನಲ್ಲಿ ಮಾತನಾಡಿದ ಮೋಹನ್ ಭಾಗವತ್, ಅಯೋಧ್ಯೆಯಲ್ಲಿ ರಾಮಮಂದಿರವನ್ನು ಮಾತ್ರ ನಿರ್ಮಾಣವಾಗಲಿದೆ. ಅಲ್ಲಿ ಮತ್ಯಾವ ಕಟ್ಟಡಗಳು ನಿರ್ಮಾಣವಾಗುವುದಿಲ್ಲ ಎಂದರು. 
ರಾಮ ಮಂದಿರ ವಿವಾದ ಬಗೆಹರಿಯುವ ಹಂತಕ್ಕೆ ಬಂದಿದೆ. ಹಲವು ವರ್ಷಗಳ ಪ್ರಯತ್ನದ ಪರಿಣಾಮ ವಿವಾದ ಶೀಘ್ರದಲ್ಲೇ ಬಗೆಹರಿಯಲಿದೆ. ಅಯೋಧ್ಯೆಯಲ್ಲಿ ಈ ಮೊದಲು ಇದ್ದ ಮಾದರಿಯಲ್ಲೇ ರಾಮ ಮಂದಿರ ನಿರ್ಮಾಣ ಮಾಡಲಾಗುತ್ತದೆ. ಅದೇ ಕಲ್ಲುಗಳಿಂದ ರಾಮಮಂದಿರ ಕಟ್ಟಲಾಗುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಹೇಳಿದರು. 
ಹಿಂದೂ ದೇಶ ವಿಶ್ವಗುರುವಾಗುವತ್ತ ಸಾಗುತ್ತಿದೆ. ರಾಮಮಂದಿರ ನಿರ್ಮಾಣವಾಗುವುದು ನೂರಕ್ಕೆ ನೂರರಷ್ಟು ಸತ್ಯವಾಗಲಿದೆ ಎಂದರು. ಉಡುಪಿಯಲ್ಲಿ ಮೂರು ದಿನಗಳ ಕಾಲ ಧರ್ಮ ಸಂಸದ್ ಕಾರ್ಯಕ್ರಮ ನಡೆಯಲಿದ್ದು ಅಲ್ಲಿ ರಾಮ ಮಂದಿರ ನಿರ್ಮಾಣ, ಮತಾಂತರ ತಡೆಗಟ್ಟುವಿಕೆ ಮತ್ತು ಗೋ ರಕ್ಷಣೆ ಈ ಮೂರು ವಿಚಾರವನ್ನು ಚರ್ಚಿಸಲಾಗುತ್ತದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com