ಮೇಟಿಕುರ್ಕೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚಿತ್ರದುರ್ಗದ ಕಡೆಗೆ ತೆರಳುತ್ತಿದ್ದ ಕ್ವಾಲಿಸ್ ಕಾರಿನ ಟಯರ್ ಸ್ಫೋಟಗೊಂಡು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರ್ಟಿಗೋ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ.