ಐಪಿಎಸ್ ಅಧಿಕಾರಿ ಡಿಐಜಿ ರೂಪಾ ವಿರುದ್ದ ರೂ. 20 ಕೋಟಿ ಮಾನನಷ್ಟ ಮೊಕದ್ದಮೆ!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಮತ್ತು ವಿಶೇಷ ಸವಲತ್ತುಗಳನ್ನು ನೀಡಲುಶಶಿಕಲಾ ಅವರಿಂದ ಲಂಚ ಪಡೆದುಕೊಂಡಿದ್ದಾರೆಂದು ಆರೋಪ ಮಾಡಿದ್ದ ಮಾಜಿ ಡಿಐಜಿ ರೂಪಾ ಹಾಗೂ ಎರಡು ಮಾಧ್ಯಮ ಸಂಸ್ಥಗಳ ವಿರುದ್ದ ನಿವೃತ್ತ ಡಿಜಿಪಿ...
ಮಾಜಿ ಡಿಐಜಿ ರೂಪಾ
ಮಾಜಿ ಡಿಐಜಿ ರೂಪಾ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಮತ್ತು ವಿಶೇಷ ಸವಲತ್ತುಗಳನ್ನು ನೀಡಲುಶಶಿಕಲಾ ಅವರಿಂದ ಲಂಚ ಪಡೆದುಕೊಂಡಿದ್ದಾರೆಂದು ಆರೋಪ ಮಾಡಿದ್ದ ಮಾಜಿ ಡಿಐಜಿ ರೂಪಾ ಹಾಗೂ ಎರಡು ಮಾಧ್ಯಮ ಸಂಸ್ಥಗಳ ವಿರುದ್ದ ನಿವೃತ್ತ ಡಿಜಿಪಿ ಹೆಚ್.ಎನ್.ಸತ್ಯನಾರಾಯಣ ರಾವ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆಂದು ತಿಳಿದುಬಂದಿದೆ. 
ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿರುವ ಸತ್ಯನಾರಾಣಯ ರಾವ್ ಅವರು, ರೂ.20 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆಂದು ವರದಿಗಳು ತಿಳಿಸಿವೆ. ಅಲ್ಲದೆ, ರೂಪಾ ಅವರು ಮಾಡಿದ್ದ ಆರೋಪಗಳನ್ನು ಯಥಾವತ್ತಾಗಿ ಪ್ರಕಟಿಸಿದ್ದ ಕಾರಣಕ್ಕೆ ಇಂಗ್ಲೀಷ್ ಪತ್ರಿಗೆ ಹಾಗೂ ಸ್ಥಳೀಯ ದೃಶ್ಯ ಮಾಧ್ಯಮದ ವಿರುದ್ಧವೂ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆಂದು ಹೇಳಲಾಗುತ್ತಿದೆ. 
ಮಾನನಷ್ಟ ಮೊಕದ್ದಮೆಯಲ್ಲಿ ರೂಪಾ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ನಿವೃತ್ತ ಐಪಿಎಸ್ ಅಧಿಕಾರಿ ಆಗ್ರಹಿಸಿದ್ದಾರೆ. 
ದಾಖಲೆಗಳನ್ನು ಪರಿಶೀಲಿಸಿರುವ ಪ್ರಕರಣವನ್ನು ಮಾನ್ಯ ಮಾಡಿರುವ ನ್ಯಾಯಲಾಯವು ಪ್ರಕರಣದ ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿದೆ. 
ಈ ಹಿಂದೆ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಉನ್ನತ ಅಧಿಕಾರಿಗಳು ರೂ.2 ಕೋಟಿ ಲಂಚ ಪಡೆದಿದ್ದಾರೆಂದು ಬಂಧಿಖಾನ ವಿಭಾಗದ ಮಾಜಿ ಡಿಐಜಿ ಡಿ.ರೂಪಾ ಅವರು ಆರೋಪ ಮಾಡಿದ್ದರು. ಈ ಸಂಬಂಧ ತಿಂಗಳ ಹಿಂದಷ್ಟೇ ರೂಪಾಗೆ ಸತ್ಯನಾರಾಯಣ ರಾವ್ ಅವರು 7 ಪುಟಗಳ ಲೀಗಲ್ ನೋಟಿಸ್ ನೀಡಿದ್ದರು. 
ನೋಟಿಸ್ ನಲ್ಲಿ ನನ್ನ ಗೌರವಕ್ಕೆ ಧಕ್ಕೆ ತರುವ ರೀತಿಯ ಹೇಳಿಕೆಯನ್ನು ನೀಡಲಾಗಿದ್ದು, ನೋಟಿಸ್ ಸಿಕ್ಕಿದ ಮೂರು ದಿನಗಳೊಳಗಾಗಿ ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲದೇ ಹೋದಲ್ಲಿ ರೂ.20 ಕೋಟಿ ಕ್ರಿಮಿನಲ್ ಮತ್ತು ಸಿವಿಲ್ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು. 
ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ರೂಪಾ ಅವರು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಮಾನನಷ್ಟ ಮೊಕದ್ದಮೆ ವಿಚಾರದಲ್ಲಿ ನ್ಯಾಯಾಲಯದ ವಿಚಾರಣೆ ಎದುರಿಸಲು ನಾನು ಸಿದ್ಧಳಿದ್ದೇನೆಂದು ಹೇಳಿದ್ದರು. ಈ ಹಿನ್ನಲೆಯಲ್ಲಿ ಸತ್ಯನಾರಾಯಣ್ ರಾವ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ರೂ.20 ಕೋಟಿ ಪರಿಹಾರ ನೀಡುವಂತೆ ಕೇಳಿದ್ದಾರೆನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com