ಕ್ಯಾನ್ಸರ್, ಹೃದ್ರೋಗ, ಶ್ವಾಸಕೋಶ ಸಂಬಂಧಿ ಕಾಯಿಲೆಗೆ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆ ನೀಡುವ ಸಂಬಂಧ ರಾಜ್ಯದಲ್ಲಿ ಸ್ವಾಯತ್ತವಾಗಿ ನಡೆಯುತ್ತಿರುವ ಕಿದ್ವಾಯಿ, ಜಯದೇವ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೆಲವು ಸರ್ಕಾರಿ ವೈದ್ಯಕೀಯ ಆಸ್ಪತ್ರೆಗಳಲ್ಲಿ ರೋಗಗಳಿಗೆ ಖಾಸಗಿ ಆಸ್ಪತ್ರೆಗಳಿಗಿಂತಲೂ ಉತ್ತಮ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿದೆಎಂದು ರಮೇಶ್ ಕುಮಾರ್ ವಿವರಿಸಿದ್ದಾರೆ.