ರಾಜ್ಯಾದ್ಯಂತ ಇಂದು ಕೋರ್ಟ್ ಕಲಾಪ ಬಹಿಷ್ಕರಿಸಲಿರುವ ವಕೀಲರು

ನ್ಯಾಯಮೂರ್ತಿ ಜಯಂತ್ ಪಟೇಲ್ ಅವರನ್ನು ಕರ್ನಾಟಕ ಹೈಕೋರ್ಟ್ ನಿಂದ ಅಲಹಬಾದ್ ಹೈಕೋರ್ಟ್ ಗೆ ವರ್ಗಾಯಿಸುವುದನ್ನು ....
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Updated on: 
ಬೆಂಗಳೂರು: ನ್ಯಾಯಮೂರ್ತಿ ಜಯಂತ್ ಪಟೇಲ್ ಅವರನ್ನು ಕರ್ನಾಟಕ ಹೈಕೋರ್ಟ್ ನಿಂದ ಅಲಹಬಾದ್ ಹೈಕೋರ್ಟ್ ಗೆ ವರ್ಗಾಯಿಸುವುದನ್ನು ವಿರೋಧಿಸಿ  ಇಂದು ಕಾರ್ಯಕಲಾಪವನ್ನು ಬಹಿಷ್ಕರಿಸುವಂತೆ ರಾಜ್ಯ ಬಾರ್ ಕೌನ್ಸಿಲ್ ನೀಡಿರುವ ಕರೆಯಿಂದಾಗಿ ಹೈಕೋರ್ಟ್ ಸೇರಿದಂತೆ ರಾಜ್ಯಾದ್ಯಂತ ಇಂದು ವಕೀಲರು ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ. ಇದರಿಂದ ನ್ಯಾಯಾಲಯದ ಕಾರ್ಯಕಲಾಪಗಳಿಗೆ ಅಡ್ಡಿಯುಂಟಾಗಲಿದೆ.
ಬಾರ್ ಕೌನ್ಸಿಲ್ ಗೆ ಬೆಂಗಳೂರು ವಕೀಲರ ಸಂಘ ಬೆಂಬಲ ವ್ಯಕ್ತಪಡಿಸಿದೆ. ತಮ್ಮನ್ನು ವರ್ಗಾಯಿಸಿರುವುದರಿಂದ ಬೇಸತ್ತು ಜಯಂತ್ ಪಟೇಲ್ ರಾಜಿನಾಮೆ ನೀಡಿದ್ದಾರೆ.
ಬಡ್ತಿ ನೀಡುವ ಸಂದರ್ಭದಲ್ಲಿ ನ್ಯಾಯಮೂರ್ತಿ ಜಯಂತ್ ಪಟೇಲ್ ಅವರನ್ನು ಅಲಹಾಬಾದ್ ಹೈಕೋರ್ಟ್ ಗೆ ವರ್ಗಾಯಿಸಲಾಗಿದೆ. ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸುಬ್ರೊ ಕಮಲ್ ಮುಖರ್ಜಿ ಇದೇ 9ರಂದು ನಿವೃತ್ತರಾಗಲಿದ್ದಾರೆ. ಇಂದು ಕಾರ್ಯಕಲಾಪ ಬಹಿಷ್ಕರಿಸಲು ರಾಜ್ಯ ಬಾರ್ ಕೌನ್ಸಿಲ್ ಕಳೆದ ತಿಂಗಳು 27ರಂದು ನಿರ್ಧರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com