ಇನ್ನೂ ವೇಣುಗೋಪಾಲ್ ಅವರ ಸೂಚನೆಯಂತೆ ಶನಿವಾರ ಸಿಎಂ ಸಿದ್ದರಾಮಯ್ಯ ಸಭೆ ಕರೆದಿದ್ದು ನಗರದ ಸಮಸ್ಯೆಗಳ ಕುರಿತು ಚರ್ಚಿಸಲಿದ್ದಾರೆ, ಸಭೆಯಲ್ಲಿ ನಗರದ ಸಚಿವರು ಶಾಸಕರು ಸೇರಿದಂತೆ ಬಿಬಿಎಂಪಿ, ಬಿಡಿಎಸ ಬಿಡಬ್ಲ್ಯೂ ಎಸ್ ಎಸ್ ಬಿ ಮತ್ತು ಬೆಸ್ಕಾಂ ನ ಉನ್ನತ ಅಧಿಕಾರಿಗಳು ಭಾಗವಹಿಸುವಂತೆ ಸೂಚಿಸಲಾಗಿದೆ. ರಾಜ ಕಾಲುವೆಗಳ ಒತ್ತುವರಿ, ಪ್ರವಾಹ ನಿಯಂತ್ರಣ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು.