ಬಿಎಂಆರ್ ಸಿಎಲ್ ನೌಕರರ ವಿರುದ್ಧ ಎಸ್ಮಾ ಜಾರಿ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಬಿಎಂಆರ್ ಸಿಎಲ್ ನೌಕರರ ವಿರುದ್ಧ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಎಸ್ಮಾ ಕಾಯ್ದೆ ಗೆ ಹೈಕೋರ್ಟ್ ಇಂದು ಮಧ್ಯಂತರ ತಡೆಯಾಜ್ಞೆ ನೀಡಿದೆ
ಕರ್ನಾಟಕ ಹೈ ಕೋರ್ಟ್
ಕರ್ನಾಟಕ ಹೈ ಕೋರ್ಟ್
ಬೆಂಗಳೂರು: ಬಿಎಂಆರ್ ಸಿಎಲ್ ನೌಕರರ ವಿರುದ್ಧ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಎಸ್ಮಾ ಕಾಯ್ದೆ ಗೆ ಹೈಕೋರ್ಟ್ ಇಂದು ಮಧ್ಯಂತರ ತಡೆಯಾಜ್ಞೆ ನೀಡಿದೆ. 
ಎಸ್ಮಾ ಜಾರಿ ಗೊಳಿಸಿದ್ದ, ರಾಜ್ಯ ಸರ್ಕಾರ ಸೇರಿದಂತೆ ಕೇಂದ್ರ ಸರ್ಕಾರ, ಬಿಎಂಆರ್ ಸಿಎಲ್ ಮುಖ್ಯಸ್ಥರಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಳೆದ ಜು.7ರಂದು ರಾಜ್ಯ ಸರ್ಕಾರ ಬಿಎಂಆರ್ ಸಿಎಲ್ ನೌಕರರ ವಿರುದ್ಧ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಜಾರಿ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಬಿಎಂಆರ್ ಸಿಎಲ್ ನೌಕರರ ಒಕ್ಕೂಟ ಹೈಕೋರ್ಟ್ ಮೊರೆ ಹೋಗಿತ್ತು. 2002ರ ಮೆಟ್ರೋ ಕಾಯ್ದೆ ಅನ್ವಯ ರಾಜ್ಯ ಸರ್ಕಾರಕ್ಕೆ  ಬಿಎಂಆರ್ ಸಿಎಲ್  ನೌಕರರ ಮೇಲೆ ಎಸ್ಮಾ ಜಾರಿಗೊಳಿಸುವ ಅಧಿಕಾರ ಇಲ್ಲ, ಹೀಗಾಗಿ ಸರ್ಕಾರ ಜಾರಿಗೊಳಿಸಿದ್ದ ಎಸ್ಮಾ ರದ್ದು ಮಾಡಬೇಕೆಂದು ಬಿಎಂಆರ್ ಸಿಎಲ್ ನೌಕರರ ಒಕ್ಕೂಟ ಕೋರ್ಟ್ ನಲ್ಲಿ ವಾದ ಮಂಡಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ  ಹೈಕೋರ್ಟ್ ಏಕಸದಸ್ಯ ಪೀಠ, ಎಸ್ಮಾ ಜಾರಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com