ಕೋಟ(ಉಡುಪಿ): ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾತನಾಡಿದ್ದಕ್ಕೆ ನನ್ನ ವಿರುದ್ಧ ಬೆದರಿಕೆ ಹಾಕುವುದರಲ್ಲಿ ಅರ್ಥವಿಲ್ಲ. ನನ್ನ ಅಭಿಪ್ರಾಯಗಳನ್ನು ಯಾರಾದರೂ ಖಂಡಿಸಬೇಕೆಂದಿದ್ದರೆ ಡಾ.ಶಿವರಾಮ ಕಾರಂತ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪಿ.ಲಂಕೇಶ್ ರಂಥಹ ಬರಹಗಾರರರ ಬರಹಗಳ ಬಗ್ಗೆ ಹೇಳಲಿ, ನಾನು ಕೇವಲ ಅವರ ಪ್ರತಿಫಲನವಷ್ಟೆ. ಅವರ ಪುಸ್ತಕಗಳನ್ನು ಸಾಕಷ್ಟು ಓದಿ ಬೆಳೆದ ನಾನು ಅವರ ಬರಹಗಳಿಂದ ಪ್ರಭಾವಿತನಾಗಿದ್ದೇನೆ. ನನಗೆ ಕಂಡಿದ್ದನ್ನು ನಾನು ಹೇಳದಿದ್ದರೆ ಅವರನ್ನು ಮೋಸಗೊಳಿಸಿದಂತೆ ಆಗುತ್ತದೆ ಎಂದು ಖ್ಯಾತ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.