ಅರ್ಚಕ ವಾಸುದೇವ್ ಹಾಗೂ ತಾಯಿ ಮಗಳು ಕೊಚ್ಚಿಹೋಗಿದ್ದ ಕುರುಬರಹಳ್ಳಿ ಪ್ರದೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಈ ವೇಳೆ ಸಂತ್ರಸ್ಥರ ಕುಟುಂಬ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಈ ವೇಳೆ ಅಧಿಕಾರಿಗಳು ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಮೃತರ ಸಂಬಂಧಿಕರು, ಪ್ರತೀ ಬಾರಿ ಮಳೆಯಾದಾಗಲೂ ಇದೇ ಪರಿಸ್ಥಿತಿ ಇರುತ್ತದೆ. ಇಂತಹ ದುರ್ಘಟನೆಗಳು ಸಂಭವಿಸಿದಾಗ ಅಧಿಕಾರಿಗಳು ಬರುತ್ತಾರೆ..ನೋಡಿಕೊಂಡು ಹೋಗುತ್ತಾರೆ. ಅದರೆ ಯಾವುದೇ ಕಾರ್ಯಗಳೂ ಆಗುವುದಿಲ್ಲ. ಹೀಗಾಗಿ ಕೂಡಲೇ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ನೀಡಿ ಎಂದು ಆಗ್ರಹಿಸಿದ್ದಾರೆ.