ಭಾನುವಾರ ಬೆಳಿಗ್ಗೆ ಯುವತಿ ಚರಂಡಿಯ ಬಳಿ ಬಹಿರ್ದೆಸೆಗೆ ತೆರಳಿದ್ದಾಗ ಈ ಘಟನೆ ನಡೆದಿದ್ದು, ಸ್ಥಳೀಯರು ಬಾಲಕಿಯನ್ನು ರಕ್ಷಿಸಲು ಯತ್ನಿಸಿದರಾದರೂ ಸಹ ರಕ್ಷಣೆ ಯಶಸ್ವಿಯಾಗಲಿಲ್ಲ, ಗಂಟೆಗಳ ನಂತರ ಆಕೆಯ ಮೃತದೇಹ ಘಟನಾ ಸ್ಥಳದಿಂದ 400 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಸ್ಥಳೀಯರಿಗೆ ಮೃತದೇಹ ಪತ್ತೆಯಾಗಿರುವುದರಿಂದ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡುವ ಸಿಬ್ಬಂದಿಗಳಿಗೆ ಮಾಹಿತಿ ನೀಡಿರಲಿಲ್ಲ ಎಂದು ಬೈಯ್ಯಪ್ಪನಹಳ್ಳಿ ಪೊಲೀಸರು ತಿಳಿಸಿದ್ದಾರೆ.