ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ರಾಜ್ಯ ಸರ್ಕಾರ ಬೆಂಗಳೂರಿನಾದ್ಯಂತ ಆರಂಭಿಸಿರುವ ಇಂದಿರಾ ಕ್ಯಾಂಟೀನ್‌...
ಯು ಟಿ ಖಾದರ್
ಯು ಟಿ ಖಾದರ್
ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ರಾಜ್ಯ ಸರ್ಕಾರ ಬೆಂಗಳೂರಿನಾದ್ಯಂತ ಆರಂಭಿಸಿರುವ ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಮುಂದಾಗಿದ್ದು, ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್ ಆರಂಭಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರು ಸೋಮವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಖಾದರ್ ಅವರು, ಮಂಗಳೂರಿನಲ್ಲಿ ಐದು, ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಒಂದು, ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲ್ಲೂಕು ಕೇಂದ್ರಗಳಲ್ಲಿ ತಲಾ ಒಂದು ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು ಎಂದರು.
ಒಂದು ಲಕ್ಷ ಜನಸಂಖ್ಯೆಗೆ ಒಂದರಂತೆ ಕ್ಯಾಂಟೀನ್ ಆರಂಭಿಸಲಾಗುತ್ತಿದ್ದು, ಮಂಗಳೂರಿನಲ್ಲಿ ಪ್ರತ್ಯೇಕ ಅಡುಗೆ ಮನೆ ಇರುತ್ತದೆ. ಉಳಿದ ಕಡೆಗಳಲ್ಲಿ ಕ್ಯಾಂಟೀನ್ ಕಟ್ಟಡದಲ್ಲಿ ಅಡುಗೆ ಮನೆಯೂ ಇರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುತ್ತಿದ್ದು, ತಾಲೂಕು ಮತ್ತು ಜಿಲ್ಲಾ ಕೇಂದ್ರಗಳು ಸೇರಿ 171 ಸ್ಥಳಗಳಲ್ಲಿ ಒಟ್ಟು 246 ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com