ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೆರಡು ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಒಳನಾಡು ಹಾಗೂ ಬೆಂಗಳೂರು ಸೇರಿದಂತೆ ಇತರೆ ಪ್ರದೇಶಗಳಲ್ಲಿ ಮತ್ತೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಒಳನಾಡು ಹಾಗೂ ಬೆಂಗಳೂರು ಸೇರಿದಂತೆ ಇತರೆ ಪ್ರದೇಶಗಳಲ್ಲಿ ಮತ್ತೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. 
ಮುಂದಿನ 24 ಗಂಟೆಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 19ರ ಹೊತ್ತಿಗೆ ಈ ಚಂಡಮಾರುತ ಆಂಧ್ರ ಪ್ರದೇಶ ಮತ್ತು ಒಡಿಸಾ ತಲುಪಲಿದ್ದು ಮೋಡ ಕವಿದ ವಾತಾವರಣ ಇರಲಿದೆ.
ಸದ್ಯ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು,  ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ವಿಜ್ಞಾನಿ ಎಸ್ ಎಸ್ ಎಂ ಗವಾಸ್ಕರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com