ಹೊಸಪೇಟೆ ಬಳಿ ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಹೊಸಪೇಟೆ:  ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ ಬಳಿ ನಡೆದಿದೆ.
ಅಪಘಾತದಲ್ಲಿ ಮೃತ ಪಟ್ಟವರೆಲ್ಲರೂ ಒಂದೇ ಕುಟುಂಬದವರಾಗಿದ್ದೂ 5 ಮಂದಿ ಗಾಯಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಗಾದಿಗನೂರು ಬಳಿ ಕಾರಿಗೆ ಆಂಧ್ರದ ಲಾರಿ ಡಿಕ್ಕಿ ಹೊಡೆದಿದೆ. 
ಮೃತಪಟ್ಟವರನ್ನು ಶ್ರೀನಿವಾಸ್​ (46), ಮೆಂಕಟಮ್ಮ (46), ನಳಿನಿ (30)  ಹಾಗೂ ಮತ್ತೊಬ್ಬರು ಮಹಿಳೆ ಎಂದು ಗುರುತಿಸಲಾಗಿದೆ. ಇವರು ಚಿತ್ರದುರ್ಗದ ಹಿರಿಯೂರಿನವರಾಗಿದ್ದು ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳುತ್ತಿದ್ದರು ಎನ್ನಲಾಗಿದೆ.
ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದ್ದು, ಗಾದಿಗನೂರು ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com