ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಕೇಂದ್ರ ಸಚಿವರ ಹೆಸರು ಸೇರಿಸುವುದು ಶಿಷ್ಟಾಚಾರ, ಶಿಷ್ಟಾಚಾರದ ಪ್ರಕಾರ ಹೆಸರು ಮುದ್ರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅನಂತ್ ಕುಮಾರ್ ಹೆಗ್ಡೆ, ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಸೇರಿಸುವುದು ಬೇಡ ಎಂದು ಸ್ವತಃ ನಾನೇ ಹೇಳಿರುವುದರಿಂದ ಸರ್ಕಾರಕ್ಕೆ ನನ್ನ ಹೆಸರು ಸೇರಿಸದಿರಲು ಅವಕಾಶವಿದೆ. ಆದರೆ ರಾಜ್ಯ ಸರ್ಕಾರ ಹಠಮಾರಿತನದಿಂದ ನನ್ನ ಹೆಸರನ್ನು ಮುದ್ರಿಸಿದ್ದೇ ಆದಲ್ಲಿ ಆ ಕಾರ್ಯಕ್ರಮಕ್ಕೆ ಹೋಗುತ್ತೇನೆ, ಭಾಷಣದಲ್ಲಿ ಟಿಪ್ಪು ಇತಿಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟು, ಧಿಕ್ಕಾರ ಕೂಗುತ್ತೇನೆ, ತಾಕತ್ ಇದ್ದರೆ ಸಿದ್ದರಾಮಯ್ಯನವರು ನನ್ನನ್ನು ತಡೆಯಲಿ ಎಂದು ಹೆಗ್ಡೆ ಸವಾಲು ಹಾಕಿದ್ದಾರೆ.