100 ಸಿಸಿ ಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನ, ಹಿಂಬದಿ ಸವಾರರಿಗೆ ಅವಕಾಶವಿಲ್ಲ

100 ಸಿಸಿ.ಗೆ ಕಡಿಮೆ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಪ್ರಯಾಣಿಸುವುದನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
100 ಸಿಸಿ ಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನ, ಹಿಂಬದಿ ಸವಾರರಿಗೆ ಅವಕಾಶವಿಲ್ಲ
100 ಸಿಸಿ ಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನ, ಹಿಂಬದಿ ಸವಾರರಿಗೆ ಅವಕಾಶವಿಲ್ಲ
ಬೆಂಗಳೂರು: 100 ಸಿಸಿ.ಗೆ ಕಡಿಮೆ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಪ್ರಯಾಣಿಸುವುದನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 100 ಸಿಸಿ ಗಿಂತಲೂ ಕಡಿಮೆ ಸಾಮರ್ಥ್ಯವಿರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸೀಟುಗಳನ್ನು ಸೇರಿಸಬಾರದೆಂದು ರಾಜ್ಯ ಸರ್ಕಾರ ದ್ವಿಚಕ್ರ ವಾಹನ ತಯಾರಕರಲ್ಲಿ ಮನವಿ ಮಾಡಿದೆ.
ಕರ್ನಾಟಕ ಹೈಕೋರ್ಟ್‌ನ ಇತ್ತೀಚಿನ ಆದೇಶದ ಅನುಸಾರ , 100 ಸಿಸಿ.ಗೆ ಕಡಿಮೆ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ, ಹಿಂಬದಿ ಸವಾರರ ಸೀಟು ಹೊಂದಿರುವ ದಿಚಕ್ರ ವಾಹನಗಳ ನೋಂದಣಿ ಮಾಡದಂತೆ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸಾರಿಗೆ ಇಲಾಖೆ ನಿರ್ದೇಶನ ನೀಡಿದೆ.
"ಕರ್ನಾಟಕ ಮೋಟಾರು ವಾಹನ ಕಾಯ್ದೆ–1989 ಪ್ರಕಾರ  100 ಸಿಸಿ ಗಿಂತ ಕಡಿಮೆ ಸಾಮರ್ಥ್ಯದ ಎಂಜಿನ್ ಹೊಂದಿರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿಯ ಸವಾರರು ಪ್ರಯಾಣ ಮಾಡುವಂತಿಲ್ಲ. ಆದರೆ, ದಿಚಕ್ರ ವಾಹನ ತಯಾರಿಕಾ ಸಂಸ್ಥೆಗಳು ಈ ಕಾನೂನು ಪಾಲಿಸುತ್ತಿರಲಿಲ್ಲ" ಎಂದು ಸಾರಿಗೆ ಇಲಾಕೆ ಅಧಿಕಾರಿಯೊಬ್ಬರು ತಿಳಿಸಿದರು.
ಇತ್ತೀಚೆಗೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಕರ್ನಾಟಕ ಮೋಟಾರು ವಾಹನ ಕಾಯ್ದೆ–1989 ಅನ್ನು ಕಟ್ಟು ನಿತ್ತಾಗಿ ಜಾರಿಗೆ ತರುವಂತೆ ಆದೇಶಿಸಿತ್ತು. ಇದೀಗ ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ಮುಂದಾಗಿದ್ದು ಈ ಕುರಿತಂತೆ ಇದೇ 16 ರಂದು ಸಾರಿಗೆ ಇಲಾಖೆ ನೋಟೀಸ್ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com