ಮಧ್ಯಾಹ್ನ 3 ಗಂಟೆಗೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಿರ್ದೇಶಕ ಗಿರೀಶ್ ಕಾಸರವಳ್ಳಿ ನಿರ್ದೇಶನದ 'ವಿಧಾನಸೌಧ ಕಟ್ಟಡ ನಿರ್ಮಾಣ' ಸಾಕ್ಷ್ಯಾಚಿತ್ರ ಪ್ರದರ್ಶನ ನಡೆಯಲಿದ್ದು, ಅನಂತರ ಟಿ.ಎನ್.ಸೀತಾರಾಂ ನಿರ್ದೇಶನದ "ಕರ್ನಾಟಕ ವಿಧಾನಮಂಡಲ ಶಾಸನಸಭೆ ನಡೆದು ಬಂದ ಹಾದಿ' ಸಾಕ್ಷ್ಯಾಚಿತ್ರ ಪ್ರದರ್ಶನ ಹಾಗೂ ಮಾಸ್ಟರ್ ಕಿಶನ್ ನಿರ್ದೇಶನದ 'ವಿಧಾನಸೌಧ 3 ಡಿ ವರ್ಚ್ಯುವಲ್ ರಿಯಾಲಿಟಿ ವಿಡಿಯೋ ಪ್ರದರ್ಶನ ನಡೆಯಲಿದೆ. ಸಂಜೆ 5ರಿಂದ 6 ಗಂಟೆವರೆಗೆ ವಿಧಾನಸೌಧ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡು-ನುಡಿ, ಕಲೆ ಸಂಸ್ಕೃತಿ, ಪರಂಪರೆ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.