ಬಡತನ, ಆರೋಗ್ಯದಂತಹ ಸಮಸ್ಯೆಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನಗಳೇ ಉತ್ತರ: ರಾಷ್ಟ್ರಪತಿ ಕೋವಿಂದ್

ದೇಶದಲ್ಲಿರುವ ಬಡತನ, ಆರೋಗ್ಯದಂತಹ ಸಮಸ್ಯೆಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನಗಳೇ ಉತ್ತರ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಹೇಳಿದ್ದಾರೆ...
ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರನ್ನು ಸ್ವಾಗತಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ವಜುಭಾಯ್ ವಾಲಾ
ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರನ್ನು ಸ್ವಾಗತಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ವಜುಭಾಯ್ ವಾಲಾ
Updated on: 

ಬೆಂಗಳೂರು: ದೇಶದಲ್ಲಿರುವ ಬಡತನ, ಆರೋಗ್ಯದಂತಹ ಸಮಸ್ಯೆಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನಗಳೇ ಉತ್ತರ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಹೇಳಿದ್ದಾರೆ. 

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದ ವಿಜ್ಞಾನಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿರುವ ಅವರು, ದೇಶದಲ್ಲಿ ಇಂದು ಬಡತನ, ಆರೋಗ್ಯ ಮತ್ತು ಆಹಾರ, ವಿದ್ಯುತ್ ಕೊರತೆ ಎಂಬ ಸಮಸ್ಯೆಗಳು ಕಾಡುತ್ತಿದ್ದು, ಈ ಸಮಸ್ಯೆಗಳನ್ನು ಪರಿಹರಿಸಲು ವಿಜ್ಞಾನ ಹಾಗೂ ತಂತ್ರಜ್ಞಾನಗಳನ್ನು ಬಳಕೆ ಮಾಡಬೇಕಿದೆ ಎಂದು ಹೇಳಿದ್ದಾರೆ. 

ಬಹುಮುಖ್ಯವಾದ ಸಂಶೋಧನಾ ಯೋಜನೆಗಳ ಕುರಿತಂತೆ ನಾನು ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ. ಈ ಬಗ್ಗಿ ವಿಜ್ಞಾನಿಗಳೊಂದಿಗೂ ಚರ್ಚೆ ನಡೆಸಿದ್ದೇನೆಂದು.

ಕಾರ್ಮಿಕರು, ವಿಜ್ಞಾನಿಗಳು, ಕೃಷಿಕರ ಅಸ್ತಿತ್ವವಿಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆಯು ಯಾವುದೇ ಅರ್ಥ ಕೊಡುವುದಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ದೊರೆತು 2022ಕ್ಕೆ 75 ವರ್ಷಗಳು ತುಂಬಲಿದೆ. ಆ ವೇಳೆಗೆ ಭಾರತವನ್ನು ಒಂದು ಮಾದರಿ ರಾಷ್ಟವನ್ನಾಗಿ ಪರಿವರ್ತಿಸಲು ಎಲ್ಲಾ ವಿಧಗಳಲ್ಲೂ ನಾವು ಶ್ರಮಿಸಬೇಕಿದೆ. ಭಾರತೀಯ ವಿಜ್ಞಾನ ಸಂಸ್ಥೆಗೆ ಸ್ವಾಮಿ ವಿವೇಕಾನಂದ, ಜಿ.ಎನ್ ಟಾಟಾ ಅವರ ಹೆಗ್ಗುರುತು ಇದ್ದು, ಇದು ಒಂದು ಜ್ಞಾನದ ಆವಿಷ್ಕಾರದ ಕೇಂದ್ರ ಬಿಂದುವಾಗಿ ನಿಂತಿದೆ ಎಂದು ತಿಳಿಸಿದ್ದಾರೆ, 

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ತಿಳಿದುಕೊಳ್ಳಲು ರಾಷ್ಟ್ರಪತಿಗಳು ಬಯಸಿದ್ದು, ಈ ಬಗ್ಗೆ ಸಭೆಯನ್ನು ಕರೆದಿದ್ದಾರೆಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ರಾಜ್ಯಪಾಲ ವಜುಭಾಯಿ ವಾಲಾ, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ, ವಿಜ್ಞಾನ ಸಂಸ್ಥೆಯ ಹಿರಿಯ ವಿಜ್ಞಾನಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com