ಪ್ರಧಾನಿ ಭೇಟಿ: 28, 29ರಂದು ಧರ್ಮಸ್ಥಳದಲ್ಲಿ ಸಾರ್ವಜನಿಕರಿಗೆ ದರ್ಶನ ನಿರ್ಬಂಧ

ಇದೇ 29ರಂದು ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನಪಡೆಯಲಿರುವುದರಿಂದ ...
ಧರ್ಮಸ್ಥಳ ದೇವಾಲಯ
ಧರ್ಮಸ್ಥಳ ದೇವಾಲಯ
Updated on
ಬೆಳ್ತಂಗಡಿ: ಇದೇ 29ರಂದು ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿರುವುದರಿಂದ 28ರ ಮಧ್ಯಾಹ್ನ 2 ಗಂಟೆಯಿಂದ 29ರ ಮಧ್ಯಾಹ್ನ 2 ಗಂಟೆಯ ತನಕ ಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. 
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಧರ್ಮಸ್ಥಳ ಸುತ್ತಮುತ್ತ ಭದ್ರತೆ ಕಲ್ಪಿಸಲಾಗಿದೆ. ಉಜಿರೆ ಹಾಗೂ ಧರ್ಮಸ್ಥಳದಲ್ಲಿ ಬಂದ್‌ ವಾತಾವರಣ ಕಂಡು ಬರಲಿದೆ. ಧರ್ಮಸ್ಥಳದಲ್ಲಿ ಶನಿವಾರ ಮಧ್ಯಾಹ್ನದಿಂದ ಭಾನುವಾರ ಮಧ್ಯಾಹ್ನದವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಮಾಲಿಕರಿಗೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com