ಗೌರಿ ಲಂಕೇಶ್ ಹತ್ಯೆ ಪ್ರಕರಣ: ರಾಮಚಂದ್ರ ಗುಹಾ ಹೇಳಿಕೆ ಪರಿಶೀಲಿಸಲಾಗುವುದು- ಪೊಲೀಸರು

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘ ಪರಿವಾರದ ವಿರುದ್ಧ ಆರೋಪ ಮಾಡಿದ್ದ ಹಿರಿಯ ಲೇಖಕ ರಾಮಚಂದ್ರ ಗುಹಾ ಅವರ ಹೇಳಿಕೆಯನ್ನು ಪರಿಶೀಲನೆ ನಡೆಸಲಾಗುವುದು...
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘ ಪರಿವಾರದ ವಿರುದ್ಧ ಆರೋಪ ಮಾಡಿದ್ದ ಹಿರಿಯ ಲೇಖಕ ರಾಮಚಂದ್ರ ಗುಹಾ ಅವರ ಹೇಳಿಕೆಯನ್ನು ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸರು ಬುಧವಾರ ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ರಾಮಚಂದ್ರ ಗುಹಾ ಅವರು, ದಾಬೋಲ್ಕರ್, ಪನ್ಸಾರೆ ಹಾಗೂ ಕಲಬುರ್ಗಿ ಹತ್ಯೆ ಮಾಡಿರುವ ಸಂಘ ಪರಿವಾರದವರೇ ಗೌರಿ ಲಂಕೇಶ್ ಹತ್ಯೆಯನ್ನೂ ಮಾಡಿರಬಹುದು ಎಂದಿದ್ದರು. ಅಲ್ಲದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್'ಡಿಎ ಪಕ್ಷವು ದ್ವೇಷ ಹಾಗೂ ಅಸಹಿಷ್ಣುತೆಯ ವಾತಾವರಣವನ್ನು ಸೃಷ್ಟಿಸಿದೆ ಎಂದು ಹೇಳಿದ್ದರು. 
ಈ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ರಾಮಚಂದ್ರ ಗುಹಾ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲು ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. 
ಬಿಜೆಪಿ ವಿರೋಧ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಲ್ಲೇಶ್ವರಂ ಪೊಲೀಸ್ ಇನ್ಸ್ ಪೆಕ್ಟರ್ ಕೆ.ಆರ್. ಪ್ರಸಾದ್ ಅವರು, ಗೌರಿ ಹತ್ಯೆ ಪ್ರಕರಣ ಕುರಿತಂತೆ ರಾಮಚಂದ್ರ ಗುಹಾ ಅವರು ನೀಡಿರುವ ಹೇಳಿಕೆ ಕುರಿತ ವಿಡಿಯೋವನ್ನು ನಾವು ಪರಿಶೀಲನೆ ನಡೆಸುತ್ತೇವೆ. ವಾರದೊಳಗಾಗಿ ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. 
ಇದೇ ವೇಳೆ ತನಿಖೆ ಸಂದರ್ಭದಲ್ಲಿ ರಾಜಕೀಯ ಒತ್ತಡಗಳೇನಾದರೂ ಇವೆಯೇ ಎಂಬುದಕ್ಕೆ ಉತ್ತರಿಸುವ ಅವರು, ತನಿಖೆಯಲ್ಲಿ ಯಾವುದೇ ರೀತಿಯ ರಾಜಕೀಯ ಒತ್ತಡಗಳಿಲ್ಲ. ನಾವು ನಮ್ಮ ಕೆಲಸವನ್ನು ಮಾಡುತ್ತಿದ್ದೇವೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com