ಬೆಂಗಳೂರು: ಶಿವಾನಂದ ವೃತ್ತ ಉಕ್ಕಿನ ಸೇತುವೆಗೆ ತಡೆ ಇಲ್ಲ; ಸರ್ಕಾರಕ್ಕೆ ಕೋರ್ಟ್ ತರಾಟೆ

ನಗರದ ಶಿವಾನಂದ ವೃತ್ತದ ಬಳಿ ಯೋಜಿಸಲಾಗಿರುವ ಉಕ್ಕಿನ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ಬುಧವಾರ ನಿರಾಕರಿಸಿದೆ...
ಕರ್ನಾಟಕ ಹೈ ಕೋರ್ಟ್
ಕರ್ನಾಟಕ ಹೈ ಕೋರ್ಟ್
ಬೆಂಗಳೂರು: ನಗರದ ಶಿವಾನಂದ ವೃತ್ತದ ಬಳಿ ಯೋಜಿಸಲಾಗಿರುವ ಉಕ್ಕಿನ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ಬುಧವಾರ ನಿರಾಕರಿಸಿದೆ. 
ಉಕ್ಕಿನ ಮೇಲ್ಸೇತುವೆ ನಿರ್ಮಾಣಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಕುಮಾರಕೃಪಾ ಪಾರ್ಕ್ ಪೂರ್ವಭಾಗದ ನಿವಾಸಿ ಬಿ.ಪಿ. ಮಹೇಳ್ ಸೇರಿ 19 ಮಂದಿ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಚ್.ಡಿ ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಸೇತುವೆ ನಿರ್ಮಾಣ ಕಾಮಗಾರಿಗೆ ತಡೆ ನೀಡಲು ನಿರಾಕರಿಸಿದೆ. 
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ವಾಹನ ಸಂಚಾರ ದಟ್ಟಣೆ ನೀಗಿಸುವ ಉದ್ದೇಶದಿಂದ ಸರ್ಕಾರ ಶಿವಾನಂದ ವೃತ್ತದ ಬಳಿ ಉಕ್ಕಿನ ಸೇತುವೆ ನಿರ್ಮಾಣ ಮಾಡುತ್ತಿದೆ. ಈ ಕಾಮಗಾರಿಯಿಂದ ಯಾವುದೇ ಪ್ರಯೋಜನವಿಲ್ಲ. ಬದಲಾಗಿ ಶೇಷಾದ್ರಿಪುರ ರಸ್ತೆ ಕಡೆ ಸಾಗುವ ಮಾರ್ಗದಲ್ಲಿ ಮತ್ತಷ್ಟು ವಾಹನ ದಟ್ಟಣೆ ಹೆಚ್ಚಾಗುತ್ತೆದ ಎಂದು ವಿವರಿಸಿದರು. 
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್. ಪೊನ್ನಣ್ಣ ಅವರು. ಇದೇ ವಿಚಾರದಲ್ಲಿ ಸ್ಥಳೀಯರು ಹಾಗೂ ಅರ್ಜಿದಾರರ ಅಹವಾಲು ಆಲಿಸಿ ಸೂಕ್ತ ಆದೇಶ ಪ್ರಕಟಿಸುವಂತೆ ಈಗಾಗಲೇ ವಿಭಾಗೀಯ ನ್ಯಾಯಪೀಠವು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಗೆ ನಿರ್ದೇಶಿಸಿದೆ. ಇದು ಎರಡನೇ ಸುದ್ದಿನ ವ್ಯಾಜ್ಯವಾಗಿದ್ದು, ಮತ್ತೆ ಈ ಅರ್ಜಿಯನ್ನು ವಿಚಾರಣೆ ನಡೆಸುವದು ಸೂಕ್ತವಲ್ಲ ಎಂದರು. 
ಸುದೀರ್ಘ ವಾದ ಹಾಗೂ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲತ ಬಳಿಕ ಕಾಮಗಾರಿ ತಡೆ ನೀಡುವ ನಿರ್ಧಾರದಿಂದ ಹಿಂದೆ ಸರಿದು, ಅ.28 ರಂದು ಅರ್ಜಿದಾರರ ಅಹವಾಲು ಆಲಿಸಿ ನ.2 ರಂದು ಅಂತಿಮ ಆದೇಶ ಪ್ರಕಟಿಸುವಂತೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವಕಿ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿ ವಿಚಾರಣೆಯನ್ನು ನ.3 ಕ್ಕೆ ಮುಂದೂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com