ವಿಜಯಪುರ: ರೆಫ್ರಿಜರೇಟರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಬಾಲಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ವಿಜಯಪುರ ತಾಲೂಕಿನ ಉತ್ನಾಳ ಗ್ರಾಮದ ನಡೆದಿದೆ..ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ಇಂದು ಈ ಘಟನೆ ಸಂಭವಿಸಿದ್ದು, ಮೃತಪಟ್ಟ ಬಾಲಕರನ್ನು ಸಂಜೀವ ಕುಮಾರ್ ಹೂಗಾರ(11) ಹಾಗೂ ಪವನ ಪ್ರಕಾಶ ಹೂಗಾರ(5) ಎಂದು ಗುರುತಿಸಲಾಗಿದೆ..ಫ್ರಿಡ್ಜ್ ನಲ್ಲಿನ ಗ್ಯಾಸ್ ಲೀಕ್ ಆದ ಪರಿಣಾಮ ಈ ಸ್ಫೋಟ ಸಂಭವಿಸಿದೆ. ಫ್ರಿಡ್ಜ್ ಬ್ಲಾಸ್ಟ್ ನಿಂದ ಬಾಲಕರ ದೇಹಗಳು ಛಿದ್ರ ಛಿದ್ರವಾಗಿವೆ..ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos