ಕೇಂದ್ರ ಸರ್ಕಾರದ ಈ ತಾರತಮ್ಯದಿಂದಾಗಿ ರಾಜ್ಯದಲ್ಲಿ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಸಮರ್ಪಕವಾಗಿ ನಡೆಯುತ್ತಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಿಂದಾಗಿ ಕೇವಲ ಎರಡು ದಿನಗಳಿಗೆ ಆಗುವಷ್ಟು ಮಾತ್ರ ಕಲ್ಲಿದ್ದಲು ಸಂಗ್ರಹವಿದೆ. ಹೀಗಾಗಿ ಕೇವಲ 2500 ಮೆ.ವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆ ಮಾಡುತ್ತಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ಕೇವಲ 13,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿತ್ತು. ಈ ನಾಲ್ಕೂವರೆ ವರ್ಷದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣವನ್ನು 20 ಸಾವಿರ ಮೆಗಾ ವ್ಯಾಟ್'ಗೆ ಹೆಚ್ಚಿಸಲಾಗಿದೆ. ಹಿಂದಿನ ಸರ್ಕಾರಗಳು ಹೆಚ್ಚು ವಿದ್ಯುತ್ ಉತ್ಪಾದಿಸುವ ಕಾರಣ ರಾಜ್ಯ ಕತ್ತಲಲ್ಲಿ ಕಾಲ ಕಳೆಯುವಂತಾಗಿತ್ತು.
ನಮ್ಮ ಸರ್ಕಾರ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ 13,000 ಎಕರೆ ಪ್ರದೇಶದಲ್ಲಿ 2,000 ಮೆಗಾ ವ್ಯಾಟ್ ಸಾಮರ್ಥ್ಯದ ಸೌರಶಕ್ತಿ ಉತ್ಪಾದಿಸುವ ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ ಸ್ಥಾಪಿಸಿದೆ. ಈ ಸಾಧನೆ ಮಾಡಿರುವುದಕ್ಕೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.