2017ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; 62 ಸಾಧಕರಿಗೆ ಪ್ರಶಸ್ತಿ

2017ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಕರ್ನಾಟಕ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಖ್ಯಾತ ಗಾಯಕ...
ಮುಖ್ಯಮಂತ್ರಿ ಚಂದ್ರು, ಯೇಸುದಾಸ್, ರಾಮಚಂದ್ರ ಗುಹಾ
ಮುಖ್ಯಮಂತ್ರಿ ಚಂದ್ರು, ಯೇಸುದಾಸ್, ರಾಮಚಂದ್ರ ಗುಹಾ
ಬೆಂಗಳೂರು: 2017ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಕರ್ನಾಟಕ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಖ್ಯಾತ ಗಾಯಕ ಯೇಸುದಾಸ್ ಸೇರಿದಂತೆ ವಿವಿಧ ಕ್ಷೇತ್ರಗಳ ಒಟ್ಟು 62 ಸಾಧಕರನ್ನು ಪ್ರಶಸ್ತಿ ಪಟ್ಟಿಗೆ ಆಯ್ಕೆ ಮಾಡಲಾಗಿದೆ.
ಇತಿಹಾಸತಜ್ಞ ರಾಮಚಂದ್ರ ಗುಹಾ, ನ್ಯಾಯಮೂರ್ತಿ ನಾಗ ಮೋಹನ್ ದಾಸ್, ಸಾಹಿತಿ ವೈದೇಹಿ ಅವರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ವಿಜೇತರಿಗೆ 1 ಲಕ್ಷ ರುಪಾಯಿ ನಗದು ಹಾಗೂ 20 ಗ್ರಾಂ ಚಿನ್ನ ಹಾಗೂ ಪ್ರಶಸ್ತಿ ಫಲಕ ನೀಡಲಾಗುತ್ತದೆ.
ನವೆಂಬರ್ 1ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜೇತರಿಗೆ ಪ್ರಶಸ್ತಿ ನೀಡಿ ಸನ್ಮಾನಿಸುತ್ತಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com