ನಿತ್ಯೋತ್ಸವ ಕವಿ ನಿಸಾರ್ ಗೆ ಪಂಪ ಪ್ರಶಸ್ತಿ

2017ನೇ ಸಾಲಿನ ಪಂಪ ಪ್ರಶಸ್ತಿ ಘೋಷಣೆಯಾಗಿದೆ. ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಪ್ರೊ.ನಿಸಾರ್ ಅಹಮದ್‌ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
ನಿಸಾರ್ ಅಹಮದ್
ನಿಸಾರ್ ಅಹಮದ್
ಬೆಂಗಳೂರು: 2017ನೇ ಸಾಲಿನ ಪಂಪ ಪ್ರಶಸ್ತಿ ಘೋಷಣೆಯಾಗಿದೆ. ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಪ್ರೊ.ನಿಸಾರ್ ಅಹಮದ್‌ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಪ್ರಶಸ್ತಿ 3 ಲಕ್ಷ ರೂ.ನಗದು, ಸ್ಮರಣಿಕೆ ಹಾಗೂ ಫಲಕವನ್ನು ಒಳಗೊಂಡಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀದಲಾಗುತ್ತದೆ.
ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ 5, 1936ರಲ್ಲಿ ಜನಿಸಿದರು ನಿಸಾರ್ ಅಹಮದ್‌ ಅವರು ಇದುವರೆಗೆ 14 ಕವನ ಸಂಕಲನ, 10 ಗದ್ಯ ಕೃತಿಗಳು, 5 ಮಕ್ಕಳ ಸಾಹಿತ್ಯ ಪುಸ್ತಕಗಳು, 5 ಅನುವಾದ ಗ್ರಂಥಗಳನ್ನು ಒಲಗೊಂಡು ಹಲವು ಪುಸ್ತಕಗಳನ್ನು ಬರೆದಿದ್ದಾರೆ.
ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದ ನಿಸಾರ್ 1984-87ರವರೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದರು. ಇವರಿಗೆ ನಾಡೋಜ ಪುರಸ್ಕಾರ, ಮಂಜೇಶ್ವರ ಗೋವಿಂದ ಪೈ ಪ್ರಶಸ್ತಿ, ಶಿವಮೊಗ್ಗದಲ್ಲಿ ನಡೆದ 73ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಭಾರತ ಸರ್ಕಾರದ ಪ್ರತಿಷ್ಟಿತ ಪದ್ಮಶ್ರೀ, ಕುವೆಂಪು ಹೆಸರಿನ ವಿಶ್ವ ಮಾನವ ಪ್ರಶಸ್ತಿ, ವಿ.ಕೃ.ಗೋಕಾಖ್ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಬಂದಿವೆ. ಈ ಬಾರಿ ಮೈಸೂರು ದಸರಾ ಉದ್ಘಾಟನೆಯನ್ನು ಸಹ ಇವರು ನೆರವೇರಿಸಿದ್ದರು.
ಈ ಸಾಲಿನ ವಿವಿಧ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಇದೇ ವೇಳೆ ರಾಜ್ಯ ಸರ್ಕಾರ ಇತರೆ ಪ್ರಶಸ್ತಿ, ಪುರಸ್ಕಾರಕ್ಕೆ ಆಯ್ಕೆಯಾದವರ ಹೆಸರನ್ನೂ ಪ್ರಕಟಿಸಿದ್ದು ಅವು ಇಂತಿದೆ- 
ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ - ಸ.ಉಷಾ 
ಸಂಗೊಳ್ಳಿ ರಾಯಣ್ಣ ಪ್ರಶಸ್ತಿ - ಜಿ.ಮಾದೇಗೌಡ 
ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ - ಬಿ.ಎ.ಜಮಾದಾರ
ಕನಕಶ್ರೀ ಪ್ರಶಸ್ತಿ - ಡಾ.ಕೆ.ಗೋಕುಲನಾಥ
ಅಕ್ಕ ಮಹಾದೇವಿ ಪ್ರಶಸ್ತಿ - ಅಕ್ಕ ಮಹಾದೇವಿ ಸಮಿತಿ ಉಡುತಡಿ, ಶಿವಮೊಗ್ಗ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com