ಕನ್ನಡ ಒಕ್ಕೂಟದಿಂದ ಗೋವಾ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

ಬರುವ 22ರಂದು ಕನ್ನಡ ಒಕ್ಕೂಟದ ನೇತೃತ್ವದಲ್ಲಿ ಸಾವಿರಾರು ಮಂದಿ ಕಾರವಾರದ ಮೂಲಕ ಮೆರವಣಿಗೆ ತೆರಳಿ ಗೋವಾ ಗೆ ಮುತ್ತಿಗೆ ಹಾಕುತ್ತೇವೆ" ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ವಾತಾಳ್ ನಾಗರಾಜ್
ವಾತಾಳ್ ನಾಗರಾಜ್
Updated on
ಕಾರವಾರ: "ಮಹದಾಯಿ ಮತ್ತು ಕಳಸಾಬಂಡೂರಿ ಯೋಜನೆಗೆ ಅಡ್ಡಿಪಡಿಸುತ್ತಿರುವ ಗೋವಾ ನೀತಿಯನ್ನು ಖಂಡಿಸಿ ಬರುವ 22ರಂದು ಕನ್ನಡ ಒಕ್ಕೂಟದ ನೇತೃತ್ವದಲ್ಲಿ ಸಾವಿರಾರು ಮಂದಿ ಕಾರವಾರದ ಮೂಲಕ ಮೆರವಣಿಗೆ ತೆರಳಿ ಗೋವಾ ಗೆ ಮುತ್ತಿಗೆ ಹಾಕುತ್ತೇವೆ" ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ರಾಜ್ಯದ ಸಂಸದರ ನಿಯೋಗ ಗೋವಾಕ್ಕೆ ತೆರಳಿ ಮಾತುಕತೆ ನಡೆಸಿದರೆ ಯಾವುದೇ ಪ್ರಯೋಜನ ಆಗದು. ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ಈ ಸಮಸ್ಯೆ ಬಗೆಹರಿಸಬೇಕೆಂದು ಅವರು ಆಗ್ರಹಿಸಿದರು.
ಲಕ್ಷ್ಮಿ ಹೆಬ್ಬಾಳಕರ್ ಗೆ ವಿರೋಧ:  ಮಹಾರಾಷ್ಟ್ರಕ್ಕೆ ಹೋಗಲು ಸಿದ್ಧರಾಗಿರುವ ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಾಲಿಗೆ, ಬಾಯಿ ಎರಡೂ ಭದ್ರವಿಲ್ಲ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುವ ಪ್ರಶ್ನೆಯೇ ಇಲ್ಲ. ಬರುವ ಮಂಗಳವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆಯಬೇಕೆಂದು ಆಗ್ರಹಿಸುತ್ತೇನೆ ಎಂದು ವಾತಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com