ಬಳ್ಳಾರಿಗೆ ತೆರಳಲು ಅನುಮತಿ ಕೋರಿ ಜನಾರ್ಧನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ "ಸುಪ್ರೀಂ"

ತವರು ಜಿಲ್ಲೆ ಬಳ್ಳಾರಿ ಪ್ರವೇಶ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ತವರು ಜಿಲ್ಲೆ ಬಳ್ಳಾರಿ ಪ್ರವೇಶ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಈ ಹಿಂದೆ ಅಕ್ರಮ ಗಣಿಕಾರಿಕೆ ಪ್ರಕರಣ ಸಂಬಂಧ ತನಿಖೆ ಎದುರಿಸುತ್ತಿರುವ ಗಾಲಿ ಜನಾರ್ಧನ ರೆಡ್ಡಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸಿಬಿಐ ವಿಶೇಷ ಕೋರ್ಟ್ ಷರತ್ತು ವಿಧಿಸಿತ್ತು. ಈ ಷರತ್ತುಗಳ ಪೈಕಿ ಜನಾರ್ಧನ ರೆಡ್ಡಿ  ಬಳ್ಳಾರಿ ಪ್ರವೇಶಿಸದಂತೆ ಹಾಗೂ ಸಾಕ್ಷ್ಚನಾಶ ಪಡಿಸದಂತೆ ಕೋರ್ಟ್ ಸೂಚನೆ ನೀಡಿತ್ತು.
ಆದರೆ ಸಿಬಿಐ ವಿಶೇಷ ಕೋರ್ಟ್ ನ ಷರತ್ತುಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ಜನಾರ್ಧನ ರೆಡ್ಡಿ, ಬಳ್ಳಾರಿಯಲ್ಲಿ ನೆಲೆಸಲು ಅವಕಾಶ ಮಾಡಿಕೊಂಡುವಂತೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ  ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಎಕೆ ಸಿಕ್ರಿ ಹಾಗೂ ಅಶೋಕ್ ಭೂಷಣ್ ನೇತೃತ್ವದ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ರೆಡ್ಡಿ ವಿರುದ್ಧ ಬಳ್ಳಾರಿ ಪ್ರವೇಶ ನಿಷೇಧ ಮುಂದುವರೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com