ಮೈಸೂರು ದಸರಾ: ಚಲನ ಚಿತ್ರೋತ್ಸವ ಈ ಬಾರಿಯ ಪ್ರಮುಖ ಆಕರ್ಷಣೆ

ದಸರಾ ಅಂಗವಾಗಿ ಸೆಪ್ಟಂಬರ್ 22 ರಿಂದ 28ರ ವರೆಗೆ ನಡೆಯುವ ಚಲನ ಚಿತ್ರೋತ್ಸವದಲ್ಲಿ ಈ ಬಾರಿ ಸುಮಾರು 50 ಕ್ಕೂ ಹೆಚ್ಚು ಕನ್ನಡ ಮತ್ತು ಬೇರೆ ಭಾಷೆಯ ...
ದಸರಾ ಚಲನ ಚಿತ್ರೋತ್ಸವ ಲೋಗೋ ಬಿಡುಗಡೆ ಕಾರ್ಯಕ್ರಮ
ದಸರಾ ಚಲನ ಚಿತ್ರೋತ್ಸವ ಲೋಗೋ ಬಿಡುಗಡೆ ಕಾರ್ಯಕ್ರಮ
Updated on
ಮೈಸೂರು: ದಸರಾ ಅಂಗವಾಗಿ ಸೆಪ್ಟಂಬರ್ 22 ರಿಂದ 28ರ ವರೆಗೆ ನಡೆಯುವ ಚಲನ ಚಿತ್ರೋತ್ಸವದಲ್ಲಿ ಈ ಬಾರಿ  ಸುಮಾರು 50 ಕ್ಕೂ ಹೆಚ್ಚು ಕನ್ನಡ ಮತ್ತು ಬೇರೆ ಭಾಷೆಯ ಸಿನಿಮಾಗಳು ಮೈದಲ ಬಾರಿಗೆ ಮೈಸೂರಿನ ಮಲ್ಟಿಪ್ಲೆಕ್ಸ್ ಗಳಲ್ಲಿ ಪ್ರದರ್ಶನಗೊಳ್ಳಲಿವೆ. 
7 ದಿನಗಳ ಕಾಲ ನಡೆಯಲಿರುವ ಚಸನ ಚಿತ್ರೋತ್ಸವದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಜೊತೆಗೆ ಮೈಸೂರಿನ ಜೈಲಿನಲ್ಲೂ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದೇವೆ ಎಂದು ದಸರಾ ಚಲನಚಿತ್ರೋತ್ಸವದ ವಿಶೇಷಾಧಿಕಾರಿಯಾದ ಡಿಸಿ ಡಿ.ರಂದೀಪ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಕಾರಿಗಳ ಕಚೇರಿಯಲ್ಲಿ ದಸರಾ ಚಲನಚಿತ್ರೋತ್ಸವ ಲೋಗೋ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಇದೇ ಮೊದಲ ಬಾರಿಗೆ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರದಲ್ಲಿ ದಿನ ಪೂರ್ತಿ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಸಿನಿಮಾಸಕ್ತರಿಗೆ ಹಬ್ಬದ ವಾತಾವರಣ ನಿರ್ಮಿಸಲಾಗಿದೆ.
ಐನಾಕ್ಸ್ ಮತ್ತು ಡಿ.ಆರ್.ಸಿ. ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ತಲಾ ಒಂದೊಂದು ಪರದೆಯಲ್ಲಿ ಎಲ್ಲಾ ನಾಲ್ಕು ಪ್ರದರ್ಶನಗಳನ್ನು ದಸರಾ ಚಲನಚಿತ್ರೋತ್ಸವದ ಉಪ ಸಮಿತಿ ವತಿಯಿಂದ ಏರ್ಪಡಿಸಲಾಗಿದೆ. ದಸರಾ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂತೆ ಮುಂದಿನ ದಿನಗಳಲ್ಲಿ ಆಯೋಜಿಸಲು ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ ಎಂದರು.  
ಮೊದಲ ಬಾರಿಗೆ ಮೈಸೂರಿನ ಜೈಲಿನಲ್ಲಿ 2 ಚಿತ್ರಗಳನ್ನ ಪ್ರದರ್ಶನ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದು, ಸಾಮಾಜಿಕ ಪರಿಣಾಮ ಬೀರುವಂತಹ ಹಾಗೂ ಮನಪರಿವರ್ತನೆ ಮಾಡುವಂತಹ ಚಲನಚಿತ್ರದ ಪ್ರದರ್ಶನವನ್ನು  ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು.
ಕಾವಾಡಿಗರು, ಮಾವುತರು ಹಾಗೂ ಬಾಲಕರ ಹಾಗೂ ಬಾಲಕಿಯರ ಬಾಲಮಂದಿರದಲ್ಲಿರುವ ಮಕ್ಕಳು, ವಿಕಲಚೇತನರ ನಿಲಯಗಳಲ್ಲಿರುವ ಮಕ್ಕಳಿಗೆ ಡಿ.ಆರ್.ಸಿ. ಮಲ್ಟಿಪ್ಲೆಕ್ಸ್ ಚಿತ್ರಮಂದಿರದಲ್ಲಿ ಚಲನಚಿತ್ರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ.  
ಮೈಸೂರು ದಸರಾ ಚಲನಚಿತ್ರೋತ್ಸವವನ್ನು ಸೆ. 21 ರಂದು ಗುರುವಾರ ಕರ್ನಾಟಕ ಕಲಾಮಂದಿರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಕನ್ನಡ ಚಿತ್ರರಂಗದ ಗಣ್ಯರು ಪಾಲ್ಗೋಳ್ಳಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com