ಬೆಂಗಳೂರು: 500ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿರುವ ಸರ್ಕಾರಿ ಪಿಯು ಕಾಲೇಜುಗಳಿಗೆ ದೈಹಿಕ ಶಿಕ್ಷಕರನ್ನು ನೇಮಕ ಮಾಡುವುದಾಗಿ ಹೇಳಿ ಆರು ತಿಂಗಳು ಕಳೆದಿದ್ದರೂ ಇದುವರೆಗೂ ಭರವಸೆ ಅನುಷ್ಠಾಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ.
ಪದವಿ ಪೂರ್ವ ಇಲಾಖೆಯ ಅಂಕಿ ಅಂಶಗಳ ಮಾಹಿತಿ ಪ್ರಕಾರ,ರಾಜ್ಯದ್ಯಾಂತ ಇರುವುದು ಕೇವಲ 20 ದೈಹಿಕ ಶಿಕ್ಷಕರು ಎಂದು ತಿಳಿದು ಬಂದಿದೆ. ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರೇ ಈ ಮಾಹಿತಿ ಬಹಿರಂಗ ಪಡಿಸಿದ್ದಾರೆ.
ರಾಜ್ಯದಲ್ಲಿ 1,204 ಸರ್ಕಾರಿ ಪಿಯು ಕಾಲೇಜುಗಳಿದ್ದು, ಅದರಲ್ಲಿ ಕೇವಲ 20 ಮಂದಿ ಮಾತ್ರ ದೈಹಿಕ ಶಿಕ್ಷಕರಿದ್ದಾರೆ
ಪಿಯಸಿ ಪಠ್ಯಕ್ರಮದಲ್ಲಿ ದೈಹಿಕ ಶಿಕ್ಷಣವನ್ನು ಒಂದು ವಿಷಯವನ್ನಾಗಿ ಮಾಡಲು ಸರ್ಕಾರ ಯೋಜಿಸಿದ್ದು, ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಮಗೆ ದೈಹಿಕ ಶಿಕ್ಷಕರ ಕೊರತೆಯಿಲ್ಲ, ಆದರೆ ಪಿಯ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಇಲ್ಲದಿರುವುದು ಸತ್ಯ ಎಂದು ಹೇಳಿದ್ದಾರೆ.
ಹಲವು ವರ್ಷಗಳಿಂದ ದೈಹಿಕ ಶಿಕ್ಷಕರ ನೇಮಕಾತಿಯೇ ನಡೆದಿಲ್ಲ,ಪ್ರತಿ 120 ವಿದ್ಯಾರ್ಥಿಗಳಿಗೆ ಒಬ್ಬ ದೈಹಿಕ ಶಿಕ್ಷಕನನ್ನು ನೇಮಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.