ರೈತರ ಸಾಲ ಮನ್ನಾ ಮಾಡಲು ದೆಹಲಿ ಚಲೋ ರ‍್ಯಾಲಿ ಮಾಡಲಿ ಬಿಜೆಪಿಯನ್ನು ಬೆಂಬಲಿಸುತ್ತೇವೆ: ಸಿಎಂ
ಹಿಂದೂ ಕಾರ್ಯಕರ್ತರ ಹತ್ಯೆಗಳನ್ನು ಖಂಡಿಸಿ, ರಾಜ್ಯ ಸರ್ಕಾರದ ಧೋರಣೆಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ‍್ಯಾಲಿ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು....
ಬೆಂಗಳೂರು: ಹಿಂದೂ ಕಾರ್ಯಕರ್ತರ ಹತ್ಯೆಗಳನ್ನು ಖಂಡಿಸಿ, ರಾಜ್ಯ ಸರ್ಕಾರದ ಧೋರಣೆಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ‍್ಯಾಲಿ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇಂತಹ ವಿಚಾರಗಳಿಗೆ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಇಂತಹ ವಿಚಾರಗಳಿಗೆ ಪ್ರತಿಭಟನೆ ಮಾಡುವ ಬದಲು ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ದೆಹಲಿ ಚಲೋ ರ‍್ಯಾಲಿ ಮಾಡಲಿ ಆಗ ನಾವೂ ಅವರೊಂದಿಗೆ ಕೈ ಜೋಡಿಸುತ್ತೇವೆ ಎಂದು ಹೇಳಿದ್ದಾರೆ.
ನಾವೂ ಸಹ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆಯನ್ನು ಖಂಡಿಸಿ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದೆವು, ಬಿಜೆಪಿಯವರು ರೈತರ ಸಾಲ ಮನ್ನಾ ವಿಷಯದಲ್ಲಿ ದೆಹಲಿ ಚಲೋ ರ‍್ಯಾಲಿ ಹಮ್ಮಿಕೊಳ್ಳಲಿ ಎಂದು ಸಿಎಂ ಹೇಳಿದ್ದಾರೆ.