ಸಕಲ ಸರ್ಕಾರಿ ಗೌರವದೊಂದಿಗೆ ಗೌರಿ ಲಂಕೇಶ್ ಅಂತ್ಯಕ್ರಿಯೆ, ವಿಧಿವಿಧಾನ ಪಾಲಿಸಲ್ಲ

ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಅಂತ್ಯಕ್ರಿಯೆಯನ್ನು....
ಗೌರಿ ಲಂಕೇಶ್
ಗೌರಿ ಲಂಕೇಶ್
Updated on: 
ಬೆಂಗಳೂರು: ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಬುಧವಾರ ಸಂಜೆ 4ಗಂಟೆಗೆ ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಈ ಕುರಿತು ಮಾತನಾಡಿರುವ ಗೌರಿ ಸಹೋದರ ಇಂದ್ರಜಿತ್ ಲಂಕೇಶ್ ಅವರು, ಲಿಂಗಾಯತ ಸಂಪ್ರದಾಯದಂತೆ ಗೌರಿ ಲಂಕೇಶ್ ಅವರ ಅಂತಿಮ ವಿಧಿವಿಧಾನ ನೆರವೇರಲಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದದ್ದು. ಯಾಕೆಂದರೆ ಗೌರಿ ಲಂಕೇಶ್ ಜೀವನದುದ್ದಕ್ಕೂ ಧಾರ್ಮಿಕ ಆಚರಣೆ ಮೇಲೆ ನಂಬಿಕೆ ಇಟ್ಟಿರಲಿಲ್ಲ. ಹೀಗಾಗಿ ಅಂತ್ಯಕ್ರಿಯೆ ವೇಳೆ ಯಾವುದೇ ವಿಧಿವಿಧಾನ ಪಾಲಿಸುವುದಿಲ್ಲ. ಕೊನೆ ಕ್ಷಣದಲ್ಲಿ ಗೌರಿ ಅವರ ನಂಬಿದ ತತ್ವಗಳಿಗೆ ಧಕ್ಕೆ ತರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗೌರಿ ಲಂಕೇಶ್ ಅಂತ್ಯಸಂಸ್ಕಾರದಲ್ಲಿ ಯಾವುದೇ ವಿಧಿ ವಿಧಾನ ಪಾಲಿಸುತ್ತಿಲ್ಲ. ಪಾರ್ಥಿವ ಶರೀರದ ಮೇಲೆ ಹೂಗಳನ್ನು ಇರಿಸಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗಣ್ಯರಿಂದ ಅಂತಿಮ ನಮನ
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವೆ ಉಮಾಶ್ರೀ, ಸಚಿವರಾದ ಆಂಜನೇಯ, ಡಿಕೆ ಶಿವಕುಮಾರ್, ಯುಟಿ ಖಾದರ್, ರಾಮಲಿಂಗಾ ರೆಡ್ಡಿ, ಸಂಸದ ವೀರಪ್ಪ ಮೊಯ್ಲಿ, ರಾಘವೇಂದ್ರ ರಾಜ್ ಕುಮಾರ್, ನಟ ಚೇತನ್, ಸಾರಾ ಗೋವಿಂದು, ನಟ, ನಿರ್ದೇಶಕ ಪ್ರಕಾಶ್ ರೈ ಸೇರಿದಂತೆ ಹಲವು ಗಣ್ಯರು ಗೌರಿ ಲಂಕೇಶ್ ಅಂತಿಮ ದರ್ಶನ ಪಡೆದು, ಗೌರಿ ಲಂಕೇಶ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com