ಲಿಂಗಾಯತ ರುದ್ರಭೂಮಿಯ ಮಣ್ಣಲ್ಲಿ ಮಣ್ಣಾದ ಪತ್ರಕರ್ತೆ ಗೌರಿ ಲಂಕೇಶ್

ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಅಂತ್ಯಕ್ರಿಯೆಯನ್ನು....
ಗೌರಿ ಲಂಕೇಶ್ ಗೆ ಅಂತಿಮ ನಮನ ಸಲ್ಲಿಸುತ್ತಿರುವ ಸಿಎಂ
ಗೌರಿ ಲಂಕೇಶ್ ಗೆ ಅಂತಿಮ ನಮನ ಸಲ್ಲಿಸುತ್ತಿರುವ ಸಿಎಂ
Updated on: 
ಬೆಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಬುಧವಾರ ಸಂಜೆ ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ನೆರವೇರಿತು.
ರಾಜ್ಯ ಸರ್ಕಾರದ ವತಿಯಿಂದ ಪೊಲೀಸ್ ಗೌರವದೊಂದಿಗೆ ಯಾವುದೇ ಸಂಪ್ರದಾಯವನ್ನು ನೆರವೇರಿಸದೇ ಹೂವನ್ನು ಇಟ್ಟು ಅಂತ್ಯಸಂಸ್ಕಾರ ನಡೆಸಲಾತಿಯು.
ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನ ಪಡೆದ ಸಾವಿರಾರು ಜನರು ರುಧ್ರಭೂಮಿಗೂ ಬಂದು ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದರು. ಗೌರಿ ಮತ್ತೆ ಹುಟ್ಟಿ ಬಾ ಎನ್ನುವ ಅಭಿಮಾನಿಗಳ ಘೋಷಣೆ ಮುಗಿಲು ಮುಟ್ಟಿತು.
ಗೌರಿ ಲಂಕೇಶ್‌ ಅವರ ಸಹೋದರ ಇಂದ್ರಜಿತ್‌ ಲಂಕೇಶ್‌, ಸಹೋದರಿ ಕವಿತಾ ಲಂಕೇಶ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಉಮಾಶ್ರೀ ,ರಾಮಲಿಂಗಾರೆಡ್ಡಿ, ರಮೇಶ್‌ ಕುಮಾರ್‌,  ಲೇಖಕ ದೇವನೂರು ಮಹಾದೇವ, ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.
ಗೌರಿ ಲಂಕೇಶ್ ಜೀವನದುದ್ದಕ್ಕೂ ಧಾರ್ಮಿಕ ಆಚರಣೆ ಮೇಲೆ ನಂಬಿಕೆ ಇಟ್ಟಿರಲಿಲ್ಲ. ಹೀಗಾಗಿ ಅಂತ್ಯಕ್ರಿಯೆ ವೇಳೆ ಯಾವುದೇ ವಿಧಿವಿಧಾನ ಪಾಲಿಸುವುದಿಲ್ಲ. ಕೊನೆ ಕ್ಷಣದಲ್ಲಿ ಗೌರಿ ಅವರ ನಂಬಿದ ತತ್ವಗಳಿಗೆ ಧಕ್ಕೆ ತರಲ್ಲ ಎಂದು ಇಂದ್ರಜಿತ್‌ ಲಂಕೇಶ್‌ ಈ ಮುಂಚೆ ಸ್ಪಷ್ಟಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com