ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಖ್ಯಾತ ನಿರ್ದೇಶಕ ಹಾಗೂ ಗೌರಿ ಲಂಕೇಶ್ ಅವರ ಸಹೋದರ ಇಂದ್ರಜಿತ್ ಲಂಕೇಶ್ ಅವರು, ಕುಟುಂಬಸ್ಥರೊಂದಿಗೆ ಚರ್ಚಿಸಲಾಗಿದ್ದು, ಗೌರಿ ಲಂಕೇಶ್ ಅವರ ಅಂತಿಮ ವಿಧಿವಿಧಾನವನ್ನು ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ಮಾಡಲಾಗುತ್ತದೆ. ಅಂತೆಯೇ ಮರಣೋತ್ತರ ಪರೀಕ್ಷೆ ಬಳಿಕ ಮೂರು ಗಂಟೆಗಳ ಕಾಲ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಇದಕ್ಕಾಗಿ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.