ಗೌರಿ ಲಂಕೇಶ್ ಹತ್ಯೆ: ಎಸ್ ಐಟಿ ತನಿಖಾ ತಂಡದ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ

ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಸಂಬಂಧ ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಸಂಬಂಧ ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಯನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈ ಸಂಬಂಧ ಖುದ್ಧು ಸಿಎಂ ಸಿದ್ದರಾಮಯ್ಯ ಅವರೇ ಎಸ್ ಐಟಿ ಅಧಿಕಾರಿಗಳಿಂದ ತನಿಖೆಯ ಪ್ರಗತಿಯ ವಿವರಗಳನ್ನು ಪರಿಶೀಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರೂ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದು, ಈ ಪೈಕಿ ತನಿಖೆ ತೀವ್ರಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಇದಕ್ಕಾಗಿ ಅಗತ್ಯ ಬಿದ್ದರೆ ಹೆಚ್ಚವರಿ ಸಿಬ್ಬಂದಿಗಳನ್ನೂ ಕೂಡ ಬಳಸಿಕೊಳ್ಳುವಂತೆ ಪೂರ್ಣ ಸ್ವತಂತ್ರ್ಯ ನೀಡಲಾಗಿದೆ ಎಂದು ತಿಳಿದುಬಂದಿದೆ.
ಗೌರಿ ಲಂಕೇಶ್ ಮನೆ, ಕಚೇರಿಗಳ ಬಳಿ ಇಂದೂ ನಡೆದ ಅಧಿಕಾರಿಗಳ ಶೋಧ
ಇನ್ನು ಪತ್ರಕರ್ತೆ ಗೌರಿ ಲಂಕೇಶ್ ಅವರ  ಸಾವಿನ ಕುರಿತಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಸಿಬ್ಬಂದಿ ಇಂದೂ ಗೌರಿ ಲಂಕೇಶ್ ಅವರ ರಾಜರಾಜೇಶ್ವರಿ ನಗರದ ನಿವಾಸ ಹಾಗೂ ಬಸವನ ಗುಡಿಯಲ್ಲಿರುವ ಕಚೇರಿಯಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com