ರಾಜ್ಯ

ಕೆಎಸ್ಆರ್'ಟಿಸಿ ಬಸ್-ಕ್ರೂಸರ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿ 6 ಮಂದಿ ದುರ್ಮರಣ

ಕೆಎಸ್ಆರ್'ಟಿಸಿ ಬಸ್ ಹಾಗೂ ಕ್ರೂಸ್ ನಡುವೆ ಸಂಭವಿಸಿದ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ...

ಕೆಎಸ್ಆರ್'ಟಿಸಿ ಬಸ್-ಕ್ರೂಸರ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿ 6 ಮಂದಿ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಬಾಗಲಕೋಟೆ: ಕೆಎಸ್ಆರ್'ಟಿಸಿ ಬಸ್ ಹಾಗೂ ಕ್ರೂಸ್ ನಡುವೆ ಸಂಭವಿಸಿದ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ. 

ವಿಜಯಪುರದಲಿಂದ ಬಾಗಲಕೋಟೆಗೆ ಬರುತ್ತಿದ್ದ ಕೆಎಸ್ಆರ್'ಟಿಸಿ ಬಸ್ ಹಾಗೂ ಮಹಾರಾಷ್ಟ್ರ ಮೂಲದ ಕ್ಸೂಸರ್ ವಾಹನಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್ ನಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸಿದ ಪರಿಣಾಮ ವಾಹನದಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. 

ಮೃತರು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಾಡ ತಾಲೂಕಿನ ದಾರಪಾಳ ಗ್ರಾಮದವರಾಗಿದ್ದಾರೆಂದು ತಿಳಿದುಬಂದಿದೆ. 

ಕ್ಸೂಸರ್ ವಾಹನದಲ್ಲಿ ಒಟ್ಟು 12 ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಸ್ತುತ ಸ್ಥಳಕ್ಕಾಗಮಿಸಿರುವ ಬೀಳಗಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.