ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯರೊಂದಿಗೆ ಎಸ್ ಐಟಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ರಾಮಲಿಂಗಾ ರೆಡ್ಡಿ ಅಧಿಕಾರಿಗಳಿಂದ ಪ್ರಕರಣದ ತನಿಖೆಯ ಪ್ರಗತಿ ಕುರಿತು ಚರ್ಚಿಸಿದರು.