ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಸೆ.28ರಂದು ಚುನಾವಣೆ ನಡೆಯಲಿದೆ.
ಪಾಲಿಕೆಯ 51ನೇ ಮೇಯರ್ ಹಾಗೂ 50ನೇ ಉಪಮೇಯರ್ ಚುನಾವಣೆ ಸೆ.28ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ.
ಅಂದು ಕೇವಲ ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕೆ ಮಾತ್ರವೇ ಚುನಾವಣೆ ನಡೆಯಲಿದೆ. ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಚುನಾವಣೆ ಅಂದು ನಡೆಯುವುದಿಲ್ಲ.
12 ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಅವಧಿ ಅಕ್ಟೋರ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ ಸ್ಥಾಯಿ ಸಮಿತಿಗಳ ಸದಸ್ಯರ ಚುನಾವಣೆಗೆ ಮತ್ತೊಂದು ದಿನ ನಿಗದಿ ಮಾದಲಾಗುತ್ತದೆ ಎಂದು ಪ್ರಾದೇಶಿಕ ಆಯುಕ್ತರು ಬಿಬಿಎಂಪಿ ಕೌನ್ಸಿಲ್ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.