ಕನ್ನಡಿಗರಿಗೆ ಸಿಗದ ಆದ್ಯತೆ: ಐಬಿಪಿಎಸ್ ಪರೀಕ್ಷಾ ಅಭ್ಯರ್ಥಿಗಳಿಂದ ತೀವ್ರ ಪ್ರತಿಭಟನೆ

ಐಬಿಪಿಎಸ್ ಬ್ಯಾಂಕಿಗ್ ಪರೀಕ್ಷೆಯಲ್ಲಿ ಹೊರ ರಾಜ್ಯದ ಅಭ್ಯರ್ಥಿಗಳಿಗೆ ಅವಕಾಶ ನೀಡಿ, ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಪರೀಕ್ಷೆಗೆ ಬಂದಿದ್ದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ,
ಐಬಿಪಿಎಸ್ ಪರೀಕ್ಷಾ ಅಭ್ಯರ್ಥಿಗಳಿಂದ ತೀವ್ರ ಪ್ರತಿಭಟನೆ
ಐಬಿಪಿಎಸ್ ಪರೀಕ್ಷಾ ಅಭ್ಯರ್ಥಿಗಳಿಂದ ತೀವ್ರ ಪ್ರತಿಭಟನೆ
ಹುಬ್ಬಳ್ಳಿ: ಐಬಿಪಿಎಸ್ ಬ್ಯಾಂಕಿಗ್ ಪರೀಕ್ಷೆಯಲ್ಲಿ ಹೊರ ರಾಜ್ಯದ ಅಭ್ಯರ್ಥಿಗಳಿಗೆ ಅವಕಾಶ ನೀಡಿ, ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಪರೀಕ್ಷೆಗೆ ಬಂದಿದ್ದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ, ಪ್ರತಿಭಟನಾ ನಿರತರಲ್ಲಿ ಒಬ್ಬರು ಬ್ಲೇಡ್‌ನಿಂದ ಕೈ ಬೆರಳು ಕೊಯ್ದುಕೊಂಡಿದ್ದಾರೆ. ಬೆರಳು ಕೊಯ್ದುಕೊಂಡವರನ್ನು  ಸಲೀಂ ಎಂದು ಗುರುತಿಸಲಾಗಿದೆ.  ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಂಧ್ರ ಪ್ರದೇಶದ ವಿದ್ಯಾರ್ಥಿಗಳಿಗೆ ಬ್ಯಾಂಕ್‌ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದನ್ನು ಪ್ರತಿಭಟಿಸಿ ಹುಬ್ಬಳ್ಳಿಯ ವಿದ್ಯಾನಗರದ ಖಾಸಗಿ ಕಾಲೇಜ್ ಬಳಿ ಪ್ರತಿಭಟನೆ ನಡೆಯುತ್ತಿದ್ದು, ಬೆಳಗ್ಗೆ 8.30ಕ್ಕೆ ಆರಂಭವಾಗಬೇಕಿದ್ದ ಐಬಿಪಿಎಸ್ ಪರೀಕ್ಷೆ ಬಂದ್ ಮಾಡಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಪರೀಕ್ಷೆ ಪ್ರವೇಶ ಪತ್ರ ಹರಿದು ಹಾಕಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತರಣದ ಹಿನ್ನಲೆಯಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

500ಕ್ಕೂ ಹೆಚ್ಚು ಅಭ್ಯರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. 
ಈ ನಡುವೆ ಅಭ್ಯರ್ಥಿಗಳು ಕಾಲೇಜು ಕಟ್ಟಡಕ್ಕೆ ಕಲ್ಲು ತೂರಿದ್ದಾರೆ ಎನ್ನಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತ ಎಂ.ಎನ್‌.ನಾಗರಾಜ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com