ನ.24ರಿಂದ ಮೂರು ದಿನ ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ನ.24 ರಿಂದ 26ರವರೆಗೆ ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ
ಮೈಸೂರಿನಲ್ಲಿ ಅಖಿಲ ಬಾರತ ಕನ್ನಡ ಸಾಹಿತ್ಯ ಸಮ್ಮೇಳನ
ಮೈಸೂರಿನಲ್ಲಿ ಅಖಿಲ ಬಾರತ ಕನ್ನಡ ಸಾಹಿತ್ಯ ಸಮ್ಮೇಳನ
ಮೈಸೂರು: ನ.24 ರಿಂದ 26ರವರೆಗೆ ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ 
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನವೆಂಬರ್ 24 ರಿಂದ ಮೂರು ದಿನ ಸಮ್ಮೇಳನ ನಡೆಸುವುದಾಗಿ ತಿಳಿಸಿದರು
ಡಿಸೆಂಬರ್ ನಲ್ಲಿ ವಿಶ್ವ ಕನ್ನಡ ಸಮ್ಮೇಳನ ಜರುಗುವುದರಿಂದ ಅದಕ್ಕೂ ಮುನ್ನವೇ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅವರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.
2018 ರಲ್ಲಿ ವಿಧಾನಸಭಾ ಚುನಾವಣೆಯೂ ಇರುವುದರಿಂದ ಸಾಹಿತ್ಯ ಸಮ್ಮೇಳನವನ್ನು ಜನವರಿಯವರೆಗೆ ಎಳೆಯುವುದು ಬೇಡ ಎಂದು ಸಾಹಿತ್ಯ ಪರಿಷತ್ತು ತೀರ್ಮಾನಿಸಿದೆ.
ಪ್ರತ್ಯೇಕ ನಾಡಧ್ವಜ, ಕೇಂದ್ರದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ, ಬ್ಯಾಂಕಿಂಗ್ ಉದ್ಯೋಗ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲಾತಿ ಹಾಗೂ ಮಾತೃಭಾಷಾ ಶಿಕ್ಷಣ ಈ ಕುರಿತು ಸಮ್ಮೇಳನದಲ್ಲಿ ಚರ್ಚೆಯಾಗುವ ಸಂಭವವಿದೆ.
ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಸ್ಥಾನ ಯಾರಿಗೆ ಒಲಿಯಲಿದೆ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com